ರಾಜಕೀಯ

ಲವ್ ಜಿಹಾದ್ ತಡೆಗೆ ಕಾನೂನು: ರಾಜ್ಯ ಬಿಜೆಪಿ ಕೋರ್ ಕಮಿಟಿಯಲ್ಲಿ ನಿರ್ಧಾರ

ರಾಜ್ಯದಲ್ಲಿ ವಿವಾಹದ ಕಾರಣಕ್ಕಾಗಿ ಧಾರ್ಮಿಕ ಮತಾಂತರ ನಿಷೇಧಿಸಲು(ಲವ್ ಜಿಹಾದ್) ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಗುರುವಾರ ಮಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಲವ್ ಜಿಹಾದ್ ತಡೆಗೆ ಕಾನೂನು: ರಾಜ್ಯ ಬಿಜೆಪಿ ಕೋರ್ ಕಮಿಟಿಯಲ್ಲಿ ನಿರ್ಧಾರ
ಅರವಿಂದ ಲಿಂಬಾವಳಿ
Published On :

ಮಂಗಳೂರು: ರಾಜ್ಯದಲ್ಲಿ ವಿವಾಹದ ಕಾರಣಕ್ಕಾಗಿ ಧಾರ್ಮಿಕ ಮತಾಂತರ ನಿಷೇಧಿಸಲು(ಲವ್ ಜಿಹಾದ್) ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಗುರುವಾರ ಮಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಅರವಿಂದ್ ಲಿಂಬಾವಳಿ ಅವರು, 'ಲವ್ ಜಿಹಾದ್' ಅನ್ನು ಕೊನೆಗೊಳಿಸಲು ಕಠಿಣ ಕಾನೂನು ಜಾರಿಗೆ ತರುವ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ಸರ್ವಾನುಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಇದಕ್ಕೂ ಮುನ್ನ ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಸಭೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಧಾರ್ಮಿಕ ಮತಾಂತರಗಳನ್ನು ಕೊನೆಗೊಳಿಸಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದರು.

ಇದೇ ವೇಳೆ ಎರಡೂವರೆ ವರ್ಷದ ಬಳಿಕ ಬಿಜೆಪಿ 140 ರಿಂದ 150 ಕ್ಷೇತ್ರಗಳಲ್ಲಿ ಗೆಲ್ಲಲಿದೆ. ಆ ಮೂಲಕ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಏರಲಿದೆ ಎಂದು ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಟಿವಿ ರಮಣ ಪೈ ಕನ್ವೆಷನಲ್ ಸೆಂಟರ್ ನಲ್ಲಿ ನಡೆದ ಬಿಜೆಪಿ ವಿಶೇಷ ಕಾರ್ಯಕಾರಿಣಿಯನ್ನು ಉದ್ಘಾಟಿಸಿ ಯಡಿಯೂರಪ್ಪ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಮೂರನೆ ಬಾರಿಗೆ ಅಧಿಕಾರ ಪಡೆಯುವುದು ನಿಶ್ಚಿತ. ಅಂತೆಯೇ ರಾಜ್ಯದಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಕಳೆದ ಬಾರಿ 104 ಶಾಸಕ ಬಲ ಪಡೆದಿದ್ದ ಕಾರಣ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚಿಸಿದವು. ಆದರೆ ಕೆಟ್ಟ ಆಡಳಿತದಿಂದಾಗಿ ಶಾಸಕರು ಬೇಸತ್ತು ಶಾಸಕ ಸ್ಥಾನಕ್ಕೆ 18 ಜನರು ರಾಜೀನಾಮೆ ನೀಡಿದರು. ಬಿಜೆಪಿ ಸರ್ಕಾರ ರಚನೆಗೆ ಅವಕಾಶ ಕಲ್ಪಿಸಿದರು ಎಂದು ಸಿಎಂ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.