ಸಿಬಿಐ ವಶಕ್ಕೆ ಪಡೆದ ಮಾತ್ರಕ್ಕೆ ವಿನಯ್ ಕುಲಕರ್ಣಿ ಮಟ್ಟ ಹಾಕಲು ಸಾಧ್ಯವಿಲ್ಲ; ಇದು ರಾಜಕೀಯ ದುರುದ್ದೇಶ: ಡಿಕೆಶಿ
ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸುವ ಸಲುವಾಗಿ ಕಾಂಗ್ರೆಸ್ ಮುಖಂಡರ ವಿನಯ್ ಕುಲಕರ್ಣಿಯನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದ್ದು ಪ್ರಕರಣ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.

ಬೆಂಗಳೂರು: ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸುವ ಸಲುವಾಗಿ ಕಾಂಗ್ರೆಸ್ ಮುಖಂಡರ ವಿನಯ್ ಕುಲಕರ್ಣಿಯನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದ್ದು ಪ್ರಕರಣ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದಿರುವುದನ್ನು ನಾನು ಗಮನಿಸಿದ್ದೇನೆ. ಈ ಹಿಂದೆ, ವಿನಯ್ ಕುಲಕರ್ಣಿ ಬಳಿ ಎಲ್ಲವನ್ನೂ ವಿಚಾರಿಸಿದ್ದೇನೆ. ಈಗಾಗಲೇ ಅವರ ಮೇಲೆ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ನಡೆಸಿ ಪೊಲೀಸರು ವರದಿ ನೀಡಿದ್ದಾರೆ’ ಎಂದರು.
ಈಗಾಗಲೇ ರಾಜ್ಯ ಪೊಲೀಸರು ಪ್ರಕರಣದ ಕುರಿತಾಗಿ ತನಿಖೆ ನಡೆಸಿದ್ದಾರೆ.ಇದೀಗ ಸಿಬಿಐ ನಡೆಸುತ್ತಿದೆ. ಇವೆಲ್ಲವನ್ನು ಗಮನಿಸಿದರೆ ಸ್ಥಳೀಯ ಬಿಜೆಪಿ ನಾಯಕರಿಗೆ ವಿನಯ್ ಕುಲಕರ್ಣಿಯನ್ನು ರಾಜಕೀಯವಾಗಿ ಮಟ್ಟ ಹಾಕುವ ಉದ್ದೇಶ ಇದೆ ಎಂದು ಆರೋಪಿಸಿದರು
ನಾನು ಆ ಭಾಗಕ್ಕೆ ಭೇಟಿ ಕೊಟ್ಟಾಗ ಹಲವರು ತನಿಖೆಯ ಕುರಿತಾಗಿ ತಮ್ಮ ನೋವು ತೋಡಿಕೊಂಡಿದ್ದರು. ಆದರೆ ಸಿಬಿಐ ಅಧಿಕಾರಿಗಳು ಕಾನೂನು ಬದ್ಧವಾಗಿ ನಡೆದುಕೊಳ್ಳುತ್ತಾರೆ. ಏನೇ ಒತ್ತಡ ಇದ್ದರೂ ಕಾನೂನು ಪ್ರಕಾರವಾಗಿ ತನಿಖೆ ನಡೆಯುತ್ತದೆ ಎಂದರು.
ಸಿಬಿಐನವರು ರಾಜಕೀಯಕ್ಕೆ ತಲೆಬಾಗಬಾರದು. ಕೆ.ಜೆ. ಜಾರ್ಜ್‌ಗೆ ಸಿಬಿಐನವರು ಎಷ್ಟು ಕಿರುಕುಳ ಕೊಟ್ಟಿದ್ದರು ಎನ್ನುವುದು ಎಲ್ಲರಿಗೂ ಗೊತ್ತಿದೆ. ರಾಜಕಾರಣದಲ್ಲಿ ಚಕ್ರ ತಿರುಗುತ್ತಿರುತ್ತದೆ. ಸಿಬಿಐನವರು ರಾಜಕೀಯ ಅಸ್ತ್ರ ಆಗಬಾರದು’ ಎಂದರು.
.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


