ಪ್ರತಿಪಕ್ಷಗಳನ್ನು ಗುರಿಯಾಗಿಸಿ ಕೇಂದ್ರ ಸರ್ಕಾರದಿಂದ ಸ್ವತಂತ್ರ ತನಿಖಾ ಸಂಸ್ಥೆಗಳ ದುರ್ಬಳಕೆ - ಮಾಜಿ ಸಚಿವ ರೇವಣ್ಣ
ರಾಜ್ಯದಲ್ಲಿ ಪ್ರತಿಪಕ್ಷಗಳ ಮುಖಂಡರನ್ನು ಗುರಿಯಾಗಿಸಿ ಸ್ವಾತಂತ್ರ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಮಾಜಿ ಸಚಿವ ಹೆಚ್. ಡಿ. ರೇವಣ್ಣ ಆರೋಪಿಸಿದ್ದಾರೆ.

ಹಾಸನ: ರಾಜ್ಯದಲ್ಲಿ ಪ್ರತಿಪಕ್ಷಗಳ ಮುಖಂಡರನ್ನು ಗುರಿಯಾಗಿಸಿ ಸ್ವಾತಂತ್ರ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಮಾಜಿ ಸಚಿವ ಹೆಚ್. ಡಿ. ರೇವಣ್ಣ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಬಂಧಿಸಿರುವುದು ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದರು.
ರಾಜ್ಯದಲ್ಲಿ 7996 ಕೋಟಿ ರೂ. ನಷ್ಟದಲ್ಲಿ ನಡೆಯುತ್ತಿರುವ ಎಲ್ಲಾ ಐದು ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಕೋಟ್ಯಂತರ ರೂಪಾಯಿ ದುರುಪಯೋಗವಾಗಿದೆ. ನಷ್ಟವನ್ನು ಸರಿದೂಗಿಸಲು ಪ್ರತಿ ಯೂನಿಟ್ ಗೆ 0.40 ಪೈಸೆಯನ್ನು ಸರ್ಕಾರ ಹೆಚ್ಚಿಗೆ ಮಾಡಿದೆ. ತಾವೂ ಇಂಧನ ಸಚಿವರಾಗಿದ್ದಾಗ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಮೀಸಲು ನಿಧಿಯಾಗಿ 600 ಕೋಟಿ ರೂ. ಇಟ್ಟಿದ್ದಾಗಿ ರೇವಣ್ಣ ತಿಳಿಸಿದರು.
ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆಯ ಗುತ್ತಿಗೆಯನ್ನು ಅಂಬಾನಿ ಸಮೂಹಕ್ಕೆ ನೀಡುವುದನ್ನು ಸಹ ರೇವಣ್ಣ ಟೀಕಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


