ರಾಜಕೀಯ

ಆರ್.ಆರ್.ನಗರ, ಶಿರಾ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪರ ಅಲೆ ಇದೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 

ರಾಜರಾಜೇಶ್ವರಿ ನಗರ ಮತ್ತು ಶಿರಾ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಚುನಾವಣೋತ್ತರ ಸಮೀಕ್ಷೆ ಹೇಳಿದರೂ ಕೂಡ ಕಾಂಗ್ರೆಸ್ ಎರಡೂ ಕ್ಷೇತ್ರಗಳಲ್ಲಿ ಜಯ ಗಳಿಸುವ ವಿಶ್ವಾಸವನ್ನು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ.

ಆರ್.ಆರ್.ನಗರ, ಶಿರಾ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪರ ಅಲೆ ಇದೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 
ಸಿದ್ದರಾಮಯ್ಯ
Published On :

ಶಿವಮೊಗ್ಗ: ರಾಜರಾಜೇಶ್ವರಿ ನಗರ ಮತ್ತು ಶಿರಾ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಚುನಾವಣೋತ್ತರ ಸಮೀಕ್ಷೆ ಹೇಳಿದರೂ ಕೂಡ ಕಾಂಗ್ರೆಸ್ ಎರಡೂ ಕ್ಷೇತ್ರಗಳಲ್ಲಿ ಜಯ ಗಳಿಸುವ ವಿಶ್ವಾಸವನ್ನು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ. 

ಶಿವಮೊಗ್ಗದಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೋತ್ತರ ಸಮೀಕ್ಷೆಗಳು ಯಾವ ಆಧಾರದ ಮೇಲೆ ವರದಿ ಮಾಡಿವೆ ಎಂದು ಗೊತ್ತಿಲ್ಲ. ಎರಡೂ ಕ್ಷೇತ್ರಗಳಲ್ಲಿ ನಾನು ಪ್ರಚಾರ ನಡೆಸಿದ್ದಾಗ ಕಾಂಗ್ರೆಸ್ ಪರ ಅಲೆ ಅಲ್ಲಿ ಕಂಡುಬಂದಿದೆ. ಎರಡೂ ಉಪ ಚುನಾವಣಾ ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ ಎಂದರು. 

ಬಿಹಾರದಲ್ಲಿ ಮಹಾಘಟಬಂಧನ ಗೆಲ್ಲಬಹುದು ಎಂದು ಚುನಾವಣೋತ್ತರ ಸಮೀಕ್ಷೆಗಳಿಂದ ತಿಳಿದುಬಂದಿದೆ. ರಾಜ್ಯದ ಜನತೆ ಅದರಲ್ಲೂ ಯುವಜನತೆ ನಿರುದ್ಯೋಗಿಗಳಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರದ ಆಡಳಿತದಿಂದ ಬೇಸತ್ತು ಹೋಗಿದ್ದಾರೆ. ವಲಸಿಗರು ಸೇರಿದಂತೆ ಅನೇಕ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ನಿತೀಶ್ ಕುಮಾರ್ ವಿಫಲರಾಗಿದ್ದಾರೆ ಎಂದರು. 

ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಂದ ಕೂಡಲೇ ಬಿ ಎಸ್ ಯಡಿಯೂರಪ್ಪನವರ ಮುಖ್ಯಮಂತ್ರಿ ಸ್ಥಾನ ಹೋಗಿ ಬೇರೆಯವರು ಮುಖ್ಯಮಂತ್ರಿ ಆಗುತ್ತಾರೆ ಎಂದು ಸಿದ್ದರಾಮಯ್ಯ ಪುನರಾವರ್ತಿಸಿದರು. 

ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಬಂಧನದ ಹಿಂದೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಕೈವಾಡವಿದ್ದು, ರಾಜ್ಯ ಪೊಲೀಸರು ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದ್ದರು, ಅದರಲ್ಲಿ ಯೋಗೇಶ್ ಗೌಡ ಕೊಲೆ ಕೇಸಿನಲ್ಲಿ ವಿನಯ್ ಕುಲಕರ್ಣಿ ಹೆಸರಿರಲಿಲ್ಲ. ಇದೀಗ ಪ್ರಹ್ಲಾದ್ ಜೋಷಿ ಅವರ ಒತ್ತಡದಿಂದ ಸಿಬಿಐ ಕುಲಕರ್ಣಿಯವರನ್ನು ಬಂಧಿಸಿದೆ. ಆದರೆ ಕಾಂಗ್ರೆಸ್ ಇಂತಹ ಬೆದರಿಕೆ ತಂತ್ರಗಳಿಗೆ ಜಗ್ಗುವುದಿಲ್ಲ ಎಂದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.