ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ ವಿ ಸಂಕನೂರ ಗೆಲುವು
ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ ವಿ ಸಂಕನೂರ ಗೆಲುವು ಸಾಧಿಸಿದ್ದಾರೆ.ನಾಲ್ಕನೇ ಹಾಗೂ ಅಂತಿಮ ಸುತ್ತಿನ ಮತಗಳ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಸಂಕನೂರ ವಿಜೇತರಾಗಿರುವುದಾಗಿ ಚುನಾವಣಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಘೋಷಿಸಿದ್ದಾರೆ.

ಧಾರವಾಡ: ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ ವಿ ಸಂಕನೂರ ಗೆಲುವು ಸಾಧಿಸಿದ್ದಾರೆ. ನಾಲ್ಕನೇ ಹಾಗೂ ಅಂತಿಮ ಸುತ್ತಿನ ಮತಗಳ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಸಂಕನೂರ ವಿಜೇತರಾಗಿರುವುದಾಗಿ ಚುನಾವಣಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಘೋಷಿಸಿದ್ದಾರೆ.
ಎಸ್ ವಿ ಸಂಕನೂರು 23857 ಮತಗಳನ್ನು ಪಡೆದರೆ, ಸಮೀಪದ ಕಾಂಗ್ರೆಸ್ ಅಭ್ಯರ್ಥಿ ಆರ್ ಎಂ ಕುಬೆರಪ್ಪ 12448, ಪಕ್ಷೇತರ ಅಭ್ಯರ್ಥಿ ಬಸವರಾಜ್ ಗುರಿಕರ್ 6188 ಮತಗಳನ್ನು ಪಡೆದುಕೊಂಡಿದ್ದಾರೆ.
ಒಟ್ಟು 52041 ಮತಗಳು ಚಲಾವಣೆಯಾಗಿದ್ದು, 43269 ಮತಗಳು ಸಿಂಧುವಾಗಿದ್ದರೆ 8772 ಮತಗಳು ಅಸಿಂಧುವಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


