ಆರ್ ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಭರ್ಜರಿ ಗೆಲುವು
ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಬೆಂಗಳೂರು: ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಈ ಹಿಂದೆ ಕಾಂಗ್ರೆಸ್ ನಿಂದ ಎರಡು ಬಾರಿ ಗೆಲುವು ಸಾಧಿಸಿದ್ದ ಮುನಿರತ್ನ ಅವರು ಈ ಬಾರಿ ಬಿಜೆಪಿ ಸೇರಿ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ.
ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಮುನಿರತ್ನ ಅವರು ಅಂತಿಮವಾಗಿ 57,672 ಮತಗಳ ಅಂತರದಿಂದ ಜಯ ಗಳಿಸಿದ್ದಾರೆ. ಬಿಜಿಪಿಯ ಮುನಿರತ್ನ ಅವರು ಒಟ್ಟು 125665 ಮತಗಳನ್ನು ಪಡೆದರೆ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು 67993 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ.
ಬಿಜೆಪಿ ಮತ್ತು ಕಾಂಗ್ರೆಸ್‌ನ ಅಬ್ಬರದ ಪ್ರಚಾರ, ಆರೋಪ– ಪ್ರತ್ಯಾರೋಪ, ಜಾತಿ– ಕಣ್ಣೀರ ರಾಜಕಾರಣದ ಕಾರಣದಿಂದ ರಾಜರಾಜೇಶ್ವರಿ ನಗರದ ಉಪ ಚುನಾವಣೆ ಭಾರೀ ಕುತೂಹಲ ಕೆರಳಿಸಿತ್ತು. ಅಲ್ಲದೆ, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ಮಧ್ಯೆ ಜಿದ್ದಾಜಿದ್ದಿನ ಪೈಪೋಟಿ ನಡೆಯಬಹುದು ಎಂದೇ ನಿರೀಕ್ಷಿಸಲಾಗಿತ್ತು. ಆದರೆ, ಮತದಾರ ಬಿಜೆಪಿ ‘ಕೈ’ ಹಿಡಿದಿರುವುದು ಬಹುತೇಕ ಸ್ಪಷ್ಟವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


