ರಾಜಕೀಯ

ಆಗ್ನೇಯ ಪದವೀಧರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಚಿದಾನಂದ ಗೌಡಗೆ ಗೆಲುವು

ಆಗ್ನೇಯ ಪದವೀಧರ ಕ್ಷೇತ್ರದ ಪರಿಷತ್ ಚುನಾವಣೆಯ ಫಲಿತಾಂಶ ಬುಧವಾರ ಪ್ರಕಟಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಚಿದಾನಂದ ಗೌಡ ಅವರು ಗೆಲುವು ಸಾಧಿಸಿದ್ದಾರೆ.

ಆಗ್ನೇಯ ಪದವೀಧರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಚಿದಾನಂದ ಗೌಡಗೆ ಗೆಲುವು
ಸಂಗ್ರಹ ಚಿತ್ರ
Published On :

ಬೆಂಗಳೂರು: ಆಗ್ನೇಯ ಪದವೀಧರ ಕ್ಷೇತ್ರದ ಪರಿಷತ್ ಚುನಾವಣೆಯ ಫಲಿತಾಂಶ ಬುಧವಾರ ಪ್ರಕಟಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಚಿದಾನಂದ ಗೌಡ ಅವರು ಗೆಲುವು ಸಾಧಿಸಿದ್ದಾರೆ.
 
ಇಂದು ನಡೆದ ಮತ ಎಣಿಕೆಯಲ್ಲಿ ಚಿದಾನಂದ ಗೌಡ ಅವರು 24,217 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರನ್ನು ಸೋಲಿಸಿದ್ದಾರೆ. 

ಚಿತ್ರದುರ್ಗ, ದಾವಣಗೆರೆ, ತುಮಕೂರು, ಕೋಲಾರ, ಚಿಕ್ಕಬಳ್ಳಾಪು ಜಿಲ್ಲೆಗಳನ್ನೊಳಗೊಂಡ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಅ.28ರಂದು ಮತದಾನ ನಡೆದಿತ್ತು. ನವೆಂಬರ್ 2ರಂದೇ ನಡೆಯಬೇಕಿದ್ದ ಮತ ಎಣಿಕೆಯನ್ನು ನವೆಂಬರ್ 10ಕ್ಕೆ ಚುನಾವಣಾ ಆಯೋಗ ಮುಂದೂಡಿತ್ತು. 

ನಿನ್ನೆ ಆಗ್ನೇಯ ಪದವೀಧದರ ಕ್ಷೇತ್ರದ ಚುನಾವಣೆಯ ಮತಎಣಿಕೆ ಪ್ರಕ್ರಿಯೆಯು ತಡವಾಗಿ ಆರಂಭವಾದ ಕಾರಣ ಇಂದು ಬೆಳಿಗ್ಗೆ ಮತ್ತೆ ಮತಎಣಿಕೆ ಪ್ರಕ್ರಿಯೆಯನ್ನು ಮುಂದುವರೆಸಲಾಗಿತ್ತು. ಇದೀಗ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಚಿದಾನಂದ ಅವರು ಗೆಲುವು ಸಾಧಿಸಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.