ಉಪಚುನಾವಣೆ ಫಲಿತಾಂಶದಿಂದ ಪಾಠ ಕಲಿಯದಿದ್ದರೆ ಕಾಂಗ್ರೆಸ್ ಪಕ್ಷವನ್ನೆ ಜನರು ಅರಬ್ಬೀ ಸಮುದ್ರಕ್ಕೆ ಬಿಸಾಡುತ್ತಾರೆ: ಕಟೀಲ್
ಜನತಾ ಜನಾರ್ದನನ ಎದುರು ಕನಕಪುರ ಬಂಡೆ ಪುಡಿಯಾಗಿದೆ. ಹುಲಿಯಾ ಗೂಡು ಸೇರಿದ್ದಾರೆ. ಇನ್ನೂ ಎರಡುವರೆ ವರ್ಷಗಳ ಕಾಲ ಯಡಿಯೂರಪ್ಪ ಅವರ ಆಡಳಿತದಲ್ಲಿ ನೆಮ್ಮದಿಯಿಂದ ಇರಿ ಎಂದು ಜನರು ಬಿಜೆಪಿಗೆ ಆಶೀರ್ವದಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಮಂಗಳೂರು: ಜನತಾ ಜನಾರ್ದನನ ಎದುರು ಕನಕಪುರ ಬಂಡೆ ಪುಡಿಯಾಗಿದೆ. ಹುಲಿಯಾ ಗೂಡು ಸೇರಿದ್ದಾರೆ. ಇನ್ನೂ ಎರಡುವರೆ ವರ್ಷಗಳ ಕಾಲ ಯಡಿಯೂರಪ್ಪ ಅವರ ಆಡಳಿತದಲ್ಲಿ ನೆಮ್ಮದಿಯಿಂದ ಇರಿ ಎಂದು ಜನರು ಬಿಜೆಪಿಗೆ ಆಶೀರ್ವದಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಎರಡೂವರೆ ವರ್ಷಗಳ ಬಿಜೆಪಿ ಆಡಳಿತವನ್ನು ಮೌನವಾಗಿ ಸಹಿಸಿಕೊಳ್ಳಿ ಎಂದು ಜನರು ವಿರೋಧ ಪಕ್ಷದ ವರಿಗೆ ಉತ್ತರ ತಕ್ಕ ಕೊಟ್ಟಿದ್ದಾರೆ.
ಹಾಗಾಗಿ ಜನರ ಉತ್ತರವನ್ನು ವಿನಂಬ್ರವಾಗಿ ಸ್ವೀಕರಿಸಿ, ಬಿಜೆಪಿ ಭ್ರಷ್ಟಾಚಾರದ ಪಕ್ಷ ವಲ್ಲ, ಕಾಂಗ್ರೆಸ್ ಭ್ರಷ್ಟಾಚಾರದ ಪಕ್ಷ ಎಂಬ ಸಂದೇಶವನ್ನು ಜನರು ನೀಡಿದ್ದು, ಈ ಚುನಾವಣೆಯ ಮೂಲಕ ರಾಷ್ಟ್ರದ ಹಾಗೂ ರಾಜ್ಯದ ಜನರು ಕಾಂಗ್ರೆಸ್ ತೆಗೆದು ಬಿಸಾಡಿದ್ದಾರೆ ಎಂದು ಅವರು ಆಕ್ರೋಷ ವ್ಯಕ್ತಪಡಿಸಿದರು.
ರಾಜರಾಜೇಶ್ವರಿ ನಗರ ಮತ್ತು ಶಿರಾಗೆ ನಡೆದ ಉಪ ಚುನಾವಣೆಯಲ್ಲಿ ಕ್ರಮವಾಗಿ ಬಿಜೆಪಿಯ ಮುನಿರತ್ನ ಮತ್ತು ರಾಜೇಶ್ ಗೌಡ ಅವರು ಗೆಲುವು ಸಾಧಿಸಿದ್ದಾರೆ. ಇನ್ನು ರಾಜರಾಜೇಶ್ವರಿ ನಗರದ ಉಪಚುನಾವಣೆಯನ್ನು ಡಿಕೆ ಸಹೋದರರು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


