ಬಿಜೆಪಿ ಸರ್ಕಾರದಿಂದ ಕಾಂಗ್ರೇಸಿಗರ ಟಾರ್ಗೆಟ್: ವಿನಯ್ ಬೆನ್ನಿಂದೆ ಪಕ್ಷವಿದೆ: ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದ ಲಕ್ಷ್ಮಿ
ಶಾಸಕರೂ, ಕೆಪಿಸಿಸಿ ವಕ್ತಾರರೂ ಆಗಿರುವ ಲಕ್ಷ್ಮಿ ಹೆಬ್ಬಾಳಕರ್ ಧಾರವಾಡದ ಮಾಜಿ ಸಚಿವ ವಿನಯ್ ಕುಲಕರ್ಣಿ ನಿವಾಸಕ್ಕೆ ತೆರಳಿ ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದರು.

ಧಾರವಾಡ: ಶಾಸಕರೂ, ಕೆಪಿಸಿಸಿ ವಕ್ತಾರರೂ ಆಗಿರುವ ಲಕ್ಷ್ಮಿ ಹೆಬ್ಬಾಳಕರ್ ಧಾರವಾಡದ ಮಾಜಿ ಸಚಿವ ವಿನಯ್ ಕುಲಕರ್ಣಿ ನಿವಾಸಕ್ಕೆ ತೆರಳಿ ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದರು.
ಬಳಿಕ ಸುದ್ಜಿಗಾರರ ಜತೆ ಮಾತನಾಡಿದ ಅವರು, ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ ಜೈಲು ಸೇರಿದ್ದಾರೆ.
ಬಿಜೆಪಿ ಸರಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿದೆ. ವಿನಾಕಾರಣ ಕಿರುಕುಳ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಇದಕ್ಕೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೆಬ್ಬಾಳಕರ್ ಹೇಳಿದರು.
ವಿನಯ್ ಕುಲಕರ್ಣಿ ಜೊತೆಗೆ ಮತ್ತು ಅವರ ಕುಟುಂಬದ ಜೊತೆ ಸಂಪೂರ್ಣ ಕಾಂಗ್ರೆಸ್ ನಿಲ್ಲಲಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಹ ಅವರ ಮನೆಗೆ ಭೇಟಿ ನೀಡಲಿದ್ದಾರೆ. ಯಾವುದೇ ಕಾರಣದಿಂದ ಧೈರ್ಯ ಕಳೆದುಕೊಳ್ಳದಂತೆ, ಸತ್ಯಕ್ಕೆ ಜಯ ಸಿಕ್ಕೇ ಸಿಗುತ್ತದೆ ಎಂದು ಧೈರ್ಯ ಹೇಳಿರುವುದಾಗಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


