ಶಿರಾ ಕ್ಷೇತ್ರ ಕಳೆದುಕೊಂಡಿದ್ದು ನೋವಾಗಿದೆ; 2023ರ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ತರುವುದು ನನ್ನ ಗುರಿ: ನಿಖಿಲ್
ನಮ್ಮ ಕುಟುಂಬಕ್ಕೆ ರಾಜಕೀಯವಾಗಿ ಆಶ್ರಯ ನೀಡಿರುವ ಕಾರಣ ರಾಮನಗರ ಜಿಲ್ಲೆಯಿಂದಲೇ ಪಕ್ಷ ಸಂಘಟನೆಗೆ ಮುಂದಾಗುತ್ತೇನೆ, ರಾಮನಗರ ಜಿಲ್ಲೆಯಿಂದಲೇ ಜೆಡಿಎಸ್ ಸಂಘಟನೆಗೆ ಚಾಲನೆ ಎಂದು ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

ಬೆಂಗಳೂರು: ನಮ್ಮ ಕುಟುಂಬಕ್ಕೆ ರಾಜಕೀಯವಾಗಿ ಆಶ್ರಯ ನೀಡಿರುವ ಕಾರಣ ರಾಮನಗರ ಜಿಲ್ಲೆಯಿಂದಲೇ ಪಕ್ಷ ಸಂಘಟನೆಗೆ ಮುಂದಾಗುತ್ತೇನೆ, ರಾಮನಗರ ಜಿಲ್ಲೆಯಿಂದಲೇ ಜೆಡಿಎಸ್ ಸಂಘಟನೆಗೆ ಚಾಲನೆ ಎಂದು ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
2023ರ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದು ತಮ್ಮ ಗುರಿ. ಈ ಹಿನ್ನಲೆಯಲ್ಲಿ ರಾಜ್ಯದಾದ್ಯಂತ ಪ್ರವಾಸ ಹಮ್ಮಿಕೊಂಡಿದ್ದು, ಯುವ ಕಾರ್ಯಕರ್ತರನ್ನು ಸಂಘಟಿಸುತ್ತೇನೆ. ನಮ್ಮ ಕುಟುಂಬಕ್ಕೆ ರಾಜಕೀಯವಾಗಿ ಜನ್ಮ ನೀಡಿದ ರಾಮನಗರದಿಂದಲೇ ಈ ಕೆಲಸ ಆರಂಭಿಸುತ್ತೇನೆ ರಾಮನಗರ ಜಿಲ್ಲೆ ನಂತರ ಬೇರೆ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳುವ ವಿವರವನ್ನು ಶೀಘ್ರದಲ್ಲಿ ಪ್ರಕಟಿಸುತ್ತೇನೆ ಎಂದರು.
ರಾಮನಗರ ಅಥವಾ ಚನ್ನಪಟ್ಟಣ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಉದ್ದೇಶ ಇಲ್ಲ. ಆದರೆ ಈಗಲೇ ಈ ಬಗ್ಗೆ ಏನನ್ನೂ ಹೇಳಲಾರೆ. ರಾಮನಗರ ಕ್ಷೇತ್ರದ ಪ್ರವಾಸದ ವೇಳೆಯಲ್ಲಿ ಜನರ ಅಹವಾಲು ಆಲಿಸಿ, ಕ್ಷೇತ್ರದ ಸಮಸ್ಯೆಗಳನ್ನು ಇಲ್ಲಿನ ಶಾಸಕರಾದ ಅನಿತಾ ಕುಮಾರಸ್ವಾಮಿ ಗಮನಕ್ಕೆ ತರುತ್ತೇನೆ’ ಎಂದರು.
ಕೋವಿಡ್ ಕಾರಣಕ್ಕೆ ನನ್ನ ಪೋಷಕರು ತಮ್ಮ ಕ್ಷೇತ್ರಗಳಿಗೆ ಹೆಚ್ಚು ಭೇಟಿ ಕೊಡಲು ಆಗಿಲ್ಲ. ಆದರೆ ಅಧಿಕಾರಿಗಳ ಬಳಿ ಇಬ್ಬರೂ ಶಾಸಕರು ನಿರಂತರ ಚರ್ಚೆ ಮಾಡುತ್ತಿದ್ದಾರೆ. ಸಾಕಷ್ಟು ಅಭಿವೃದ್ದಿ ಕಾಮಗಾರಿಗಳು ನಡೆಯುತ್ತಿವೆ ಎಂದು ಹೇಳಿದರು.
ಶಿರಾ ಕ್ಷೇತ್ರ ಕಳೆದುಕೊಂಡಿದ್ದು ಮನಸ್ಸಿಗೆ ತುಂಬಾ ನೋವಾಗಿದೆ. ಕುಮಾರಸ್ವಾಮಿರವರು ಮುಖ್ಯಮಂತ್ರಿಯಾಗಿದ್ದಾಗ ಮಾಡಿದ ರೈತರ ಸಾಲಮನ್ನಾವಾಗಲಿ ಅಥವಾ ಅಭಿವೃದ್ಧಿ ಕಾರ್ಯಗಳನ್ನಾಗಲಿ ಜನರು ಪರಿಗಣಿಸಲಿಲ್ಲ. ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುತ್ತಿದ್ದೇವೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


