ಸಂಪುಟ ಕಸರತ್ತು: ಇಂದು ದೆಹಲಿಗೆ ಸಿಎಂ ಯಡಿಯೂರಪ್ಪ
ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಅಂತಿಮ ಹಂತ ತಲುಪಿರುವ ಲಕ್ಷಣಗಳು ಕಂಡು ಬರುತ್ತಿದೆ. ಈ ಬಗ್ಗೆ ಚರ್ಚೆ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ದೆಹಲಿಗೆ ತೆರಳಲಿದ್ದಾರೆ.

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಅಂತಿಮ ಹಂತ ತಲುಪಿರುವ ಲಕ್ಷಣಗಳು ಕಂಡು ಬರುತ್ತಿದೆ. ಈ ಬಗ್ಗೆ ಚರ್ಚೆ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ದೆಹಲಿಗೆ ತೆರಳಲಿದ್ದಾರೆ.
ಮೂಲಗಳ ಪ್ರಕಾರ ಹೈಕಮಾಂಡ್ ಜೊತೆಗೆ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಚರ್ಚಿಸುವ ಉದ್ದೇಶದೊಂದಿಗೆ ಯಡಿಯೂರಪ್ಪ ಅವರು ದೆಹಲಿಗೆ ತೆರಳುತ್ತಿದ್ದಾರೆಂದು ಹೇಳಲಾಗುತ್ತಿದ್ದು, ಬುಧವಾರ ರಾತ್ರಿಯೇ ನಗರಕ್ಕೆ ವಾಪಸ್ಸಾಗಲಿದ್ದಾರೆಂದು ಮೂಲಗಳು ತಿಳಿಸಿವೆ.
ಇಂದು ಬೆಳಿಗ್ಗೆ 10.30ಕ್ಕೆ ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳುವ ಸಿಎಂ ಯಡಿಯೂರಪ್ಪ ಅವರು 11.30ಕ್ಕೆ ವಿಶೇಷ ವಿಮಾನದಲ್ಲಿ ನವದೆಹಲಿಗೆ ತೆರಳಲಿದ್ದಾರೆ.
ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಿದ ಬಳಿಕ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಯಡಿಯೂರಪ್ಪ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


