ಸಂಪುಟ ವಿಸ್ತರಣೆ ಯಾವಾಗ ಎಂದು ಕಾದು ನೋಡಿ: ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್
ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಅವರ ವಿವೇಚನೆಗೆ ಬಿಟ್ಟಿದ್ದಾಗಿದ್ದು, ಯಾವಾಗ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗಲಿದೆ ಎನ್ನುವುದನ್ನು ಕಾದು ನೋಡಿ...

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಅವರ ವಿವೇಚನೆಗೆ ಬಿಟ್ಟಿದ್ದಾಗಿದ್ದು, ಯಾವಾಗ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗಲಿದೆ ಎನ್ನುವುದನ್ನು ಕಾದು ನೋಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಬಿ ಫಾರಂ ಪಡೆದು ಗೆದ್ದ ನಂತರ ಮೂಲ ವಲಸಿಗ ಎನ್ನುವ ಮಾತು ಬಿಜೆಪಿಯಲ್ಲಿ ಇಲ್ಲ. ಎಲ್ಲರೂ ಬಿಜೆಪಿಯ ನಾಯಕರು. ಆದರೆ ಕೆಲ ಸಚಿವರನ್ನು ಸಂಪುಟದಿಂದ ಕೈ ಬಿಡುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಆದು ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರ ಎಂದರು.
ರಾಷ್ಟ್ರೀಯ ಅಧ್ಯಕ್ಷರು ಮಾತುಕತೆ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಮಯವಕಾಶ ಕೊಟ್ಟಿದ್ದರು. ಅದರಂತೆ ಮುಖ್ಯಮಂತ್ರಿಗಳು ದೆಹಲಿಗೆ ತೆರಳಿ ಜೆ.ಪಿ ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಕಟೀಲ್ ತಿಳಿಸಿದರು.
ನಡ್ಡಾ ಅವರು ಮುಖ್ಯ ಮಂತ್ರಿಗಳ ಜೊತೆ ಏನು ಮಾತನಾಡಬೇಕಿತ್ತೋ ಅದನ್ನು ಮಾತನಾಡಿದ್ದಾರೆ. ಅದೇ ರೀತಿ ಮುಖ್ಯಮಂತ್ರಿಗಳು ಕೊಡ ರಾಷ್ಟ್ರೀಯ ಅಧ್ಯಕ್ಷರ ಗಮನಕ್ಕೆ ಏನೆಲ್ಲಾ ತರಬೇಕು ತಂದಿದ್ದಾರೆ. ಇಲ್ಲಿ ಕಡಿಮೆ ಸಮಯ ನೀಡಿದ್ದರು ನಿರ್ಲಕ್ಷ್ಯ ಮಾಡಿದ್ದಾರೆ ಎನ್ನುವ ಪ್ರಶ್ನೆ ಉದ್ಭವಿಸಲ್ಲ ಎನ್ನುವ ಮೂಲಕ ರಾಷ್ಟ್ರೀಯ ಅಧ್ಯಕ್ಷರ ಭೇಟಿ ಮತ್ತು ಚೆರ್ಚೆಯ ವಿಚಾರಗಳ ಬಗ್ಗೆ ಸಮರ್ಥನೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


