ಸಚಿವ ಸ್ಥಾನಕ್ಕಾಗಿ ಶಾಸಕರು ಲಾಬಿ ನಡೆಸುವುದರಲ್ಲಿ ಯಾವ ತಪ್ಪೂ ಇಲ್ಲ: ಸಚಿವ ಎಸ್.ಟಿ. ಸೋಮಶೇಖರ್
ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿರುವುದರಲ್ಲಿ ಯಾವ ತಪ್ಪೂ ಇಲ್ಲ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಬುಧವಾರ ಹೇಳಿದ್ದಾರೆ.

ಬೆಳಗಾವಿ: ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿರುವುದರಲ್ಲಿ ಯಾವ ತಪ್ಪೂ ಇಲ್ಲ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಬುಧವಾರ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸಹಕಾರ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿ ಅವರು, ಜನರಪರ ಕೆಲಸಗಳಿಗೆ ಸಹಾಯವಾಗುತ್ತದೆ ಎಂದು ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುವುದು ಸಾಮಾನ್ಯ. ಇದರಲ್ಲಿ ಯಾವ ತಪ್ಪೂ ಇಲ್ಲ ಎಂದು ಹೇಳಿದ್ದಾರೆ.
ಅಂತಿಮವಾಗಿ ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂಬುದರ ಕುರಿತು ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯುರಪ್ಪ ಅವರು ತೆಗೆದುಕೊಳ್ಳಲಿದ್ದಾರೆಂದು ತಿಳಿಸಿದ್ದಾರೆ.
ಈಗಾಗಲೇ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಕುರಿತು ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಸಂಬಂಧಿಸಿದ್ದಾಗಿದ್ದು, ನಿನ್ನೆಯಷ್ಟೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಿ ವಾಪಸ್ಸಾಗಿದ್ದಾರೆ. ಭೇಟಿ ವೇಳೆ ಹೈಕಮಾಂಡ್ ನಿಂದ ಯಾವುದೇ ಹಸಿರು ನಿಶಾನೆಗಳು ದೊರೆತಿಲ್ಲ ಎಂದು ಹೇಳಲಾಗುತ್ತಿದೆ. ಈ ನಡುವೆ ಸಚಿವ ಜಾರಕಿಹೊಳಿ ಕೂಡ ಕೇಂದ್ರೀಯ ನಾಯಕರನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದು, ಜಾರಕಿಹೊಳಿಯವರ ಆಗ್ರಹಗಳನ್ನು ಹೈಕಮಾಂಡ್ ಈಡೇರಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


