ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಪರಮಾಧಿಕಾರಕ್ಕೆ ಬಿಟ್ಟಿದ್ದು: ಬಿ.ಸಿ. ಪಾಟೀಲ್
ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಪರಮಾಧಿಕಾರ ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದ್ದು, ಈ ಸಂಬಂಧ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಕೃಷಿ ಸಚಿವರೂ ಆಗಿರುವ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಕೊಪ್ಪಳ: ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಪರಮಾಧಿಕಾರ ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದ್ದು, ಈ ಸಂಬಂಧ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಕೃಷಿ ಸಚಿವರೂ ಆಗಿರುವ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಕೊಪ್ಪಳದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ.ಪಾಟೀಲ್, ಶಾಸಕರೆಲ್ಲರಿಗೂ ಸಚಿವರಾಗಬೇಕು ಎನ್ನುವ ಆಸೆ ಸಹಜವೇ. ಇದರಲ್ಲಿ ತಪ್ಪೇನಿಲ್ಲ. ಸಚಿವ ಸಂಪುಟವೋ ವಿಸ್ತರಣೆಯೋ ಎನ್ನುವುದು ವರಿಷ್ಠರಿಗೆ ಬಿಟ್ಟ ವಿಚಾರ. ಮುಖ್ಯಮಂತ್ರಿ ಪರಮಾಧಿಕಾರ ಎಂದರು.
ಸರ್ಕಾರ ಮರಾಠ ಅಭಿವೃದ್ಧಿ ನಿಗಮ ಹಾಗೂ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಗಳಿಗೆ ಆದೇಶ ಮಾಡಿರುವುದು ಸ್ವಾಗತಾರ್ಹವಾಗಿದ್ದು, ಇದರಿಂದ ಮರಾಠ ಹಾಗೂ ವೀರಶೈವ ಲಿಂಗಾಯತ ಸಮುದಾಯಗಳ ಹಿಂದುಳಿದವರಿಗೆ ಬಡವರಿಗೆ ಅನುಕೂಲವಾಗಲಿದೆ. ಇದು ಮರಾಠಿ ಭಾಷೆ ಪ್ರಾಧಿಕಾರ ಇದಲ್ಲ. ಕರ್ನಾಟಕದಲ್ಲಿರುವ ಮರಾಠಿಗರನ್ನು ಕರ್ನಾಟಕ ಬಿಟ್ಟು ಕಳುಹಿಸಲಾಗುವುದಿಲ್ಲ. ಮರಾಠರ ಅಭಿವೃದ್ಧಿಗಾಗಿ ಸರ್ಕಾರ ನಿಗಮ ಮಾಡಿದ್ದು ಸ್ವಾಗತಾರ್ಹ. ಅದರಂತೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಮಾಡಿದ್ದು ಸಹ ಸರಿಯಾಗಿದೆ.
ರಾಜ್ಯದಲ್ಲಿ ವೀರಶೈವ ಲಿಂಗಾಯತ ದೊಡ್ಡ ಸಮುದಾಯವಾಗಿದ್ದರೂ ಈ ಸಮುದಾಯದಲ್ಲಿ ಬಡವರು ಹಿಂದುಳಿದವರು ಇದ್ದಾರೆ. ನಿಗಮ ರಚನೆಯಿಂದ ಇವರಿಗೆ ಅನುಕೂಲವಾಗಲಿದೆ. ಇದೇ ರೀತಿ ಮರಾಠ ಅಭಿವೃದ್ಧಿ ನಿಗಮದಿಂದ ಮರಾಠಿಗರಲ್ಲಿರುವ ಬಡವರಿಗೆ ಹಿಂದುಳಿದವರಿಗೂ ಕೂಡ ಅನುಕೂಲವಾಗಲಿದೆ. ಕುಂಬಾರ ಅಭಿವೃದ್ಧಿ ನಿಗಮ, ವಿಶ್ವಕರ್ಮ ಅಭಿವೃದ್ಧಿ ನಿಗಮ, ಬ್ರಾಹ್ಮಣ ನಿಗಮ, ಅಲ್ಪಸಂಖ್ಯಾತರಿಗೂ ನಿಗಮವಿದೆ ಎಂದರು. ಓಲೈಕೆಗಾಗಿ ನಿಗಮ ರಚನೆ ಮಾಡಿರುವುದಲ್ಲ. ಸಮುದಾಯಗಳ ಅಭಿವೃದ್ಧಿಗಾಗಿ ನಿಗಮ ರಚಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


