ರಾಜಕೀಯ

'ಸಿದ್ದರಾಮಯ್ಯ ಅವರಿಗೆ ಬುದ್ದಿವಂತಿಕೆ ಇರಲಿಲ್ಲ, ಅವರು ಮಾಡಿದ ತಪ್ಪನ್ನು ನೀವು ಮಾಡಬೇಡಿ'

ಸಿದ್ದರಾಮಯ್ಯನವರಿಗೆ ಬುದ್ದಿವಂತಿಕೆ ಇರಲಿಲ್ಲ. ಸಿಎಂ ಯಡಿಯೂರಪ್ಪನವರಿಗೆ ಅದನ್ನೇ ಹೇಳುತ್ತಿದ್ದೇನೆ. ಸಿದ್ದರಾಮಯ್ಯ ಮಾಡಿದ ತಪ್ಪನ್ನು ನೀವು ಮಾಡಬೇಡಿ, ಸ್ವಲ್ಪ ಬುದ್ದಿವಂತಿಕೆಯಿಂದ ತೀರ್ಮಾನ ತಗೊಳ್ಳಿ ಎಂದು ಹೇಳುತ್ತಿದ್ದೇನೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಮತ್ತೊಮ್ಮೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

'ಸಿದ್ದರಾಮಯ್ಯ ಅವರಿಗೆ ಬುದ್ದಿವಂತಿಕೆ ಇರಲಿಲ್ಲ, ಅವರು ಮಾಡಿದ ತಪ್ಪನ್ನು ನೀವು ಮಾಡಬೇಡಿ'
ವಿ.ಶ್ರೀನಿವಾಸ್ ಪ್ರಸಾದ್
Published On :

ಮೈಸೂರು: ಅಧಿಕಾರ ಕೆಲವೊಮ್ಮೆ ಎಲ್ಲರನ್ನೂ ಬದಲಾವಣೆ ಮಾಡಿಸಿಬಿಡುತ್ತದೆ. ಸಿಎಂ ಯಡಿಯೂರಪ್ಪ ಹಿಂದಿಗಿಂತ ಬದಲಾಗಿದ್ದಾರೆ ಎಂದು ಹೇಳೋಕೆ ಆಗುವುದಿಲ್ಲ. ಹಾಗಂತ ಅವರು ಬದಲಾಗಿಲ್ಲ  ಎಂದು ಹೇಳುವುದಕ್ಕಾಗುವುದಿಲ್ಲ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಮತ್ತೊಮ್ಮೆ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಶ್ರೀನಿವಾಸ್ ಪ್ರಸಾದ್,  ಸಿಎಂ ಆಗಿ ಅಧಿಕಾರ ನಡೆಸುವುದು ಬಹಳ ಕಠಿಣ ಕೆಲಸ. ನಿಗಮ ಮಂಡಳಿ ಆಯ್ಕೆ ವಿಚಾರ‌ದಲ್ಲಿ ನನಗೆ ಅತೃಪ್ತಿ ಇದೆ. ಇನ್ನೂ ಉತ್ತಮವಾಗಿ ಅಧ್ಯಕ್ಷರ ನೇಮಕಾತಿ ಮಾಡಬಹುದಿತ್ತು. ಎಲ್ಲರ ಸಲಹೆ ಪಡೆದು ಮಾಡಬಹುದಿತ್ತು ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯನವರಿಗೆ ಬುದ್ದಿವಂತಿಕೆ ಇರಲಿಲ್ಲ. ಸಿಎಂ ಯಡಿಯೂರಪ್ಪನವರಿಗೆ ಅದನ್ನೇ ಹೇಳುತ್ತಿದ್ದೇನೆ. ಸಿದ್ದರಾಮಯ್ಯ ಮಾಡಿದ ತಪ್ಪನ್ನು ನೀವು ಮಾಡಬೇಡಿ, ಸ್ವಲ್ಪ ಬುದ್ದಿವಂತಿಕೆಯಿಂದ ತೀರ್ಮಾನ ತಗೊಳ್ಳಿ ಎಂದು ಯಡಿಯೂರಪ್ಪನವರಿಗೆ ಹೇಳುತ್ತಿದ್ದೇನೆ ಎಂದ ಅವರು ನಾಯಕತ್ವ ಬದಲಾವಣೆ ಸಂಬಂಧ ಪ್ರತಿಕ್ರಿಯಿಸಲು ನಿರಾಕರಿಸಿದರು. 

ಉಪ ಚುನಾವಣೆಯಲ್ಲಿ ಒಳ್ಳೆಯ ಫಲಿತಾಂಶ ಬಂದಿದೆ. ಇದಕ್ಕಾಗಿ ಹೀಗ್ಗಿ ಹೀರೇಕಾಯಿ ಆಗಬೇಕಿಲ್ಲ. ವಿಪಕ್ಷಗಳು ಕುಸಿದು ಹೋಗಿವೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.