'ಚನ್ನಪಟ್ಟಣಕ್ಕೆ ನಾನೇ ಮಂತ್ರಿ, ನಾನೇ ಸರ್ಕಾರ: ಅವರು 20 ಕೆರೆ ತುಂಬಿಸಿದ್ದರೆ ನಾನು 128 ಕೆರೆ ತುಂಬಿಸಿದ್ದೇನೆ'
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಮ್ಮ ಜಿಲ್ಲೆಯ ನಾಲ್ವರನ್ನು ಮಂತ್ರಿ ಮಾಡಲಿ. ಯಾರನ್ನು ಮಂತ್ರಿ ಮಾಡಬೇಡಿ ಎಂದು ಹೇಳುವಷ್ಟು ಕೀಳುಮಟ್ಟಕ್ಕೆ ನಾನು ಇಳಿಯುವುದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ರಾಮನಗರ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಮ್ಮ ಜಿಲ್ಲೆಯ ನಾಲ್ವರನ್ನು ಮಂತ್ರಿ ಮಾಡಲಿ. ಯಾರನ್ನು ಮಂತ್ರಿ ಮಾಡಬೇಡಿ ಎಂದು ಹೇಳುವಷ್ಟು ಕೀಳುಮಟ್ಟಕ್ಕೆ ನಾನು ಇಳಿಯುವುದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಚನ್ನಪಟ್ಟಣ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಯಾರನ್ನಾದರೂ ಮಂತ್ರಿ ಮಾಡಲಿ, ಚನ್ನಪಟ್ಟಣಕ್ಕೆ ನಾನೇ ಸಚಿವ, ನಾನೇ ಸರ್ಕಾರ ಎಂದು ಗುಡುಗಿದ್ದಾರೆ.
ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚಿಸಲು ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದೆ. ಯಾರನ್ನೋ ಮಂತ್ರಿ ಮಾಡಬೇಡಿ ಎಂದು ಹೇಳುವುದಕ್ಕಲ್ಲ. ಬಡವರ ಭೂಮಿ ಕಬಳಿಸಲು ಹೊರಟವರು ಮಂತ್ರಿಯಾಗಲು ಹೊರಟಿದ್ದಾರೆ. ಇಲ್ಲಿ ಯಾರೋ ಮಂತ್ರಿಯಾದರೆ ಹೆದರಿಕೊಂಡು ಹೋಗುವ ಜಾಯಮಾನ ನನ್ನದಲ್ಲ’ ಎಂದರು.
ಎಂಥೆಂತವರನ್ನು ನಾವು ನೋಡಿಲ್ಲ, ಇಲ್ಯಾರೋ ಮಂತ್ರಿಯಾದರೆ ಹೆದರಿಕೊಂಡು ಹೋಗುತ್ತೀವಾ, ಅವರು 20 ಕೆರೆ ತುಂಬಿಸಿರೋದಕ್ಕೆ ಭಗೀರಥ ಆಗಿಬಿಟ್ಟರು, ನಾನು 128 ಕೆರೆ ತುಂಬಿಸಿದ್ದೇನೆ. ನಾನು ಪ್ರಾಮಾಣಿಕವಾಗಿ ಕೆಲಸ ಮಾಡಿರುವ ವ್ಯಕ್ತಿ ಎಂದು ವಾಗ್ದಾಳಿ ನಡೆಸಿದರು.
ಲಿಂಗಾಯತ ಸಮುದಾಯವನ್ನು ಒಬಿಸಿಗೆ ಸೇರ್ಪಡೆ ಮಾಡಲು ಶಿಫಾರಸು ಮಾಡುವ ವಿಚಾರದ ಬಗ್ಗೆ ಚರ್ಚೆ ಮಾಡುವುದಿಲ್ಲ’ ಎಂದು ಕುಮಾರಸ್ವಾಮಿ ಹೇಳಿದರು. ಸ್ವಾರ್ಥಕ್ಕಾಗಿ ಮಾಡುತ್ತಿರುವ ವಿವಾದಾತ್ಮಕ ವಿಚಾರಕ್ಕೆ ತಲೆಹಾಕುವುದಿಲ್ಲ’ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


