ರಾಜಕೀಯ

ಸಂತೋಷ್ ಆತ್ಮಹತ್ಯೆ ಯತ್ನಕ್ಕೆ 'ಪರ್ಸನಲ್ ವಿಡಿಯೋ' ಕಾರಣ: ಡಿ.ಕೆ. ಶಿವಕುಮಾರ್

ಪರ್ಸನಲ್ ವಿಡಿಯೋವೊಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ಕಾರಣವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಸಂತೋಷ್ ಆತ್ಮಹತ್ಯೆ ಯತ್ನಕ್ಕೆ 'ಪರ್ಸನಲ್ ವಿಡಿಯೋ' ಕಾರಣ: ಡಿ.ಕೆ. ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
Published On :

ಕಾರವಾರ; ಪರ್ಸನಲ್ ವಿಡಿಯೋವೊಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನಕ್ಕೆ ಕಾರಣವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಅವರು ಯಾರದ್ದೋ ವೈಯಕ್ತಿಕ ವಿಡಿಯೋವೊಂದನ್ನು ವಿಧಾನಪರಿಷತ್ ಸದಸ್ಯರಿಗೆ ಹಾಗೂ ಸಚಿವರಿಗೆ ಕೊಟ್ಟಿದ್ದ ಮಾಹಿತಿ 2-3 ತಿಂಗಳ ಹಿಂದೆ ಬಂದಿತ್ತು. ಇದನ್ನು ಮುಂದಿಟ್ಟುಕೊಂಡು ವಿಧಾನಪರಿಷತ್ ಸದಸ್ಯರು, ಸಚಿವರಿಬ್ಬರೂ ಸೇರಿ ಮುಖ್ಯಮಂತ್ರಿ ಹಾಗೂ ಸಂತೋಷ್ ಇಬ್ಬರಿಗೂ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರೆಂದು ಕೇಳಿದ್ದೆ. ಅದರ ಸತ್ಯಾಂಶಗಳೇನೆಂಬುದು ಗೊತ್ತಿಲ್ಲ ಎಂದು ಹೇಳಿದ್ದಾರೆ. 

ವಿಡಿಯೋದಲ್ಲಿ ಗುಪ್ತ ಮಾಹಿತಿಯೇನೋ ಅಡಗಿದೆ. ಮುಖ್ಯಮಂತ್ರಿಗಳ ಕಾರ್ಯದರ್ಶಿ ಆತ್ಮಹತ್ಯೆಗೆ ಯತ್ನಿಸುವುದು ಸಾಮಾನ್ಯ ವಿಚಾರವಲ್ಲ. ಹಾಗಾಗಿ ಈ ಕುರಿತು ತನಿಖೆಯಾಗಬೇಕಿದೆ. ಸತ್ಯಾಂಶ ಏನಿದೆ ಎಂಬುದರ ಬಗ್ಗೆ ತನಿಖೆಯಾಗಬೇಕು. ಆದರೆ, ಈ ತನಿಖೆಯು ರಾಜ್ಯ ಸರ್ಕಾರದಿಂದ ಆಗಬಾರದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.