ಯಡಿಯೂರಪ್ಪ ಅವರೇ ನಮ್ಮ ನಾಯಕರು, ಅವರು ಬದಲಾಗಲ್ಲ: ಸಚಿವ ಎಸ್.ಟಿ.ಸೋಮಶೇಖರ್
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ನಮ್ಮ ನಾಯಕರು. ಅದರಲ್ಲಿ ಯಾವುದೇ ಪ್ರಶ್ನೆಯೂ ಇಲ್ಲ. ಅವರ ನಾಯಕತ್ವ ಬದಲಾವಣೆ ಆಗುವುದಿಲ್ಲ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಪೊನ್ನಂಪೇಟೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ನಮ್ಮ ನಾಯಕರು. ಅದರಲ್ಲಿ ಯಾವುದೇ ಪ್ರಶ್ನೆಯೂ ಇಲ್ಲ. ಅವರ ನಾಯಕತ್ವ ಬದಲಾವಣೆ ಆಗುವುದಿಲ್ಲ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,ಮುಖ್ಯಮಂತ್ರಿಯವರು ನುಡಿದಂತೆ ನಡೆಯುವವರು ಅವರು ಮಾತು ಕೊಟ್ಟಂತೆ ನಮ್ಮೆಲ್ಲರನ್ನು ಸಚಿವರನ್ನಾಗಿ ಮಾಡಿದ್ದಾರೆ.ಅಲ್ಲದೆ ಸೋತವರಿಗೂ ಕೂಡ ಮಂತ್ರಿಗಿರಿ ಕೊಟ್ಟಿದ್ದಾರೆ. ಇನ್ನೂ ಸಂಪುಟ ವಿಸ್ತರಣೆಯಾಗಲಿ,ಪುನರಾಚನೆಯಾಗಲೀ ಆಗಿಲ್ಲ. ಅದನ್ನು ಮಾಡುವ ಸಮಯದಲ್ಲಿ ಯಾರಿಗೆ ಸ್ಥಾನ ಕೊಡಬೇಕು..? ಕೊಡಬಾರದು..? ಎಂಬ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳಲಿದ್ದಾರೆ. ಈಗಲೂ ಸಹ ಅವರು ಉಳಿದವರನ್ನು ಕೈಬಿಡುವುದಿಲ್ಲ ಎಂಬ ವಿಶ್ವಾಸ ನಮಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇದೇ ವೇಳೆ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಸಂತೋಷ್ ಅವರ ಆತ್ಮಹತ್ಯೆ ಯತ್ನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಸಂತೋಷ್ ಯಾವ ಕಾರಣಕ್ಕೆ ಆತ್ಮಹತ್ಯೆ ಯತ್ನ ಮಾಡಿದ್ದಾರೆ ಎಂಬ ಬಗ್ಗೆ ಕಾರಣ ತಿಳಿದುಬಂದಿಲ್ಲ. ಕಳೆದ ವಾರ ಮೈಸೂರಿನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಯಡಿಯೂರಪ್ಪ ಜತೆ ಸಂತೋಷ್ ಸಹ ಪಾಲ್ಗೊಂಡು, ಲವಲವಿಕೆಯಿಂದಲೇ ಮಾತನಾಡಿದ್ದರು. ಅವರ ನಡೆ ಹಾಗೂ ವರ್ತನೆಯಲ್ಲಿ ಯಾವುದೇ ರೀತಿಯ ಬೇಸರ ಕಾಣುತ್ತಿರಲಿಲ್ಲ ಎಂದು ಹೇಳಿದರು.
ಆತ್ಮಹತ್ಯೆ ಯತ್ನಕ್ಕೆ ವೈಯಕ್ತಿಕ ರಹಸ್ಯ ವಿಡಿಯೊ ಕಾರಣ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪ ಸತ್ಯಕ್ಕೆ ದೂರ. ಆ ರೀತಿಯ ವಿಡಿಯೊ ಇದ್ದರೆ ಹೊರಗೆ ತರಲಿ ಎಂದ ಅವರು, ಸಂತೋಷ್ ಒಳ್ಳೆಯ ಹುಡುಗ. ರಾಜಕೀಯವಾಗಿ ಇನ್ನೂ ಮುಂದೆ ಬರಬೇಕಿದೆ. ಮಾನಸಿಕ ತೊಂದರೆ ಕಂಡಿರಬಹುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


