2-3 ದಿನಗಳಲ್ಲಿ ಸಂಪುಟ ವಿಸ್ತರಣೆಯಾಗಲಿದೆ: ಸಿಎಂ ಯಡಿಯೂರಪ್ಪ
ಸಂಪುಟ ವಿಸ್ತರಣೆ ಕುರಿತು ಯಾವುದೇ ಗೊಂದಲಗಳಿಲ್ಲ. ಇನ್ನೂ 2-3 ದಿನಗಳಲ್ಲಿ ಸಂಪುಟ ವಿಸ್ತರಣೆಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.

ಚಿತ್ರದುರ್ಗ: ಸಂಪುಟ ವಿಸ್ತರಣೆ ಕುರಿತು ಯಾವುದೇ ಗೊಂದಲಗಳಿಲ್ಲ. ಇನ್ನೂ 2-3 ದಿನಗಳಲ್ಲಿ ಸಂಪುಟ ವಿಸ್ತರಣೆಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಸ್ತರಣೆ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಎಲ್ಲವೂ ಸರಿ ಹೋಗುತ್ತದೆ. ವಿಸ್ತರಣೆ ಕುರಿತು ಸಾಧ್ಯವಾದಲ್ಲಿ ಹೈಕಮಾಂಡ್ ಜೊತೆ ಚರ್ಚಿಸುತ್ತೇನೆ. ಪಟ್ಟಿ ಬೇಗ ಕ್ಲಿಯರ್ ಮಾಡಿಕೊಡುವಂತೆ ಮನವಿ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.
ಯಾರು ಯಾರು ಸಚಿವರಾಗುತ್ತಾರೆಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತಿದ್ದಾರೆಂದ ಅವರು ಪಕ್ಷ ಅಧಿಕಾರಕ್ಕೆ ಬರುವ ಸಲುವಾತಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳನ್ನು ತೊರೆದು ಬಂದಿದ್ದ ಬಂಡಾಯ ನಾಯಕರಿಗೆ ಸಚಿವ ಸ್ಥಾನ ನೀಡಲಿದ್ದಾರೆಯೇ ಎಂಬ ಪ್ರಶ್ನೆಗ ಉತ್ತರಿಸಲು ನಿರಾಕರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


