ರಾಜಕೀಯ

ಗ್ರಾಪಂ ಚುನಾವಣೆ ಫಲಿತಾಂಶ ಬರುವವರೆಗೂ ಸಚಿವಾಕಾಂಕ್ಷಿಗಳು ಕಾಯಲೇಬೇಕು: ಬೈರತಿ ಬಸವರಾಜ್

ಗ್ರಾ.ಪಂ. ಚುನಾವಣೆ ಎದುರಿಸಲು ಬಿಜೆಪಿ ಸಿದ್ಧವಾಗಿದೆ. ಚುನಾವಣೆ ಶಾಂತಿಯುತವಾಗಿ ನಡೆಯಲು ಎಲ್ಲಾ ಕ್ರಮಕೈಗೊಳ್ಳಲಾಗಿದ್ದು, ಎಲ್ಲಾ ಸಚಿವರಿಗೂ ಚುನಾವಣಾ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಹೇಳಿದ್ದಾರೆ.

ಗ್ರಾಪಂ ಚುನಾವಣೆ ಫಲಿತಾಂಶ ಬರುವವರೆಗೂ ಸಚಿವಾಕಾಂಕ್ಷಿಗಳು ಕಾಯಲೇಬೇಕು: ಬೈರತಿ ಬಸವರಾಜ್
ಬೈರತಿ ಬಸವರಾಜ್
Published On :

ಬೆಂಗಳೂರು: ಗ್ರಾ.ಪಂ. ಚುನಾವಣೆ ಎದುರಿಸಲು ಬಿಜೆಪಿ ಸಿದ್ಧವಾಗಿದೆ. ಚುನಾವಣೆ ಶಾಂತಿಯುತವಾಗಿ ನಡೆಯಲು ಎಲ್ಲಾ ಕ್ರಮಕೈಗೊಳ್ಳಲಾಗಿದ್ದು, ಎಲ್ಲಾ ಸಚಿವರಿಗೂ ಚುನಾವಣಾ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾ.ಪಂ. ಚುನಾವಣೆ ಮುಂದೂಡಲು ಸರ್ಕಾರವೇನೂ ಪ್ರಯತ್ನಿಸಿರಲಿಲ್ಲ. ಕೊರೋನಾ ಕಾರಣಕ್ಕಾಗಿ ಮುಂದೂಡಲು ಚಿಂತನೆ ನಡೆಸಿತ್ತಷ್ಟೆ. ಈಗ ಚುನಾವಣಾ ಆಯೋಗ ಚುನಾವಣೆ ಘೋಷಿಸಿದ್ದು, ಆಯೋಗದ ತೀರ್ಮಾನಕ್ಕೆ ಬದ್ಧರಾಗಬೇಕಾಗುತ್ತದೆ ಎಂದರು.

ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಯಾಗಿರುವುದರಿಂದ ಸಂಪುಟ ವಿಸ್ತರಣೆ ಅಥವಾ ಪುನರಾಚನೆ ಮುಂದಕ್ಕೆ ಹೋಗುವುದು ಸಹಜ. ಚುನಾವಣೆ ಫಲಿತಾಂಶ ಬರುವವರೆಗೂ ಸಚಿವಾಕಾಂಕ್ಷಿಗಳು ಕಾಯಲೇಬೇಕಾಗುತ್ತದೆ. ಏನೂ ಮಾಡಲು ಆಗುವುದಿಲ್ಲ ಎಂದು ಬೈರತಿ ಹೇಳಿದರು.

ಈ ಮಧ್ಯೆ, ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಗೂ ಸಂಪುಟ ವಿಸ್ತರಣೆಗೂ ಸಂಬಂಧವಿಲ್ಲ. ಇನ್ನು ಎರಡು ದಿನಗಳಲ್ಲಿ ಸಂಪುಟ ವಿಸ್ತರಣೆ ಆಗುತ್ತೇನೋ ನೋಡೋಣ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.