ರಾಜಕೀಯ

ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಗೂ ಸಂಪುಟ ವಿಸ್ತರಣೆಗೂ ಸಂಬಂಧವಿಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ

ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಗೂ ಸಂಪುಟ ವಿಸ್ತರಣೆಗೂ ಸಂಬಂಧವಿಲ್ಲ. ಇನ್ನು ಎರಡು ದಿನಗಳಲ್ಲಿ ಸಂಪುಟ ವಿಸ್ತರಣೆ ಆಗುತ್ತೇನೋ ನೋಡೋಣ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾರ್ಮಿಕ‌ವಾಗಿ ಹೇಳಿದ್ದಾರೆ.

ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಗೂ ಸಂಪುಟ ವಿಸ್ತರಣೆಗೂ ಸಂಬಂಧವಿಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ
Published On :

ಬೆಂಗಳೂರು:  ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಗೂ ಸಂಪುಟ ವಿಸ್ತರಣೆಗೂ ಸಂಬಂಧವಿಲ್ಲ. ಇನ್ನು ಎರಡು ದಿನಗಳಲ್ಲಿ ಸಂಪುಟ ವಿಸ್ತರಣೆ ಆಗುತ್ತೇನೋ ನೋಡೋಣ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾರ್ಮಿಕ‌ವಾಗಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯ್ತಿ ಚುನಾವಣೆ ವೇಳಾಪಟ್ಟಿ ಘೋಷಣೆಯಾಗಿದೆ. ನೀತಿ ಸಂಹಿತೆ ಜಾರಿಯಲ್ಲಿದೆ. ಅಭಿವೃದ್ಧಿ ಕೆಲಸ, ಇತರ ಚಟುವಟಿಕೆ ಮಾಡುವಂತಿಲ್ಲ ಎಂದರು.

ಪಂಚಾಯ್ತಿ ಚುನಾವಣೆ ಪಕ್ಷಾತೀತವಾಗಿ ನಡೆದರೂ ಯಾರು ಯಾವ ಪಕ್ಷದವರು ಎಂಬುದು ಗೊತ್ತಾಗುತ್ತದೆ. ಸಂಘಟನೆ ದೃಷ್ಟಿಯಿಂದ ಪಂಚಾಯ್ತಿ ಚುನಾವಣೆಯೂ ಮುಖ್ಯ. ತಳಮಟ್ಟದಲ್ಲಿ ಪಕ್ಷವನ್ನು ಬಲಪಡಿಸಬೇಕಾದರೆ ಒಳ್ಳೆಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು. ಇದು ಲೋಕಸಭೆ, ವಿಧಾನಸಭೆ ಚುನಾವಣೆಯಷ್ಟೇ ಮಹತ್ವವಾದುದು ಎಂದು ಯಡಿಯೂರಪ್ಪ ಹೇಳಿದರು.

ಇದೀಗಾಗಲೇ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ  ತಂಡಗಳು ಪ್ರವಾಸ ಮಾಡುತ್ತಿದೆ, ಈಗಾಗಲೇ ಗ್ರಾಮ ಸ್ವಾರಾಜ್ ಸಮಾವೇಶಗಳನ್ನು ಮಾಡುತ್ತಿದ್ದೇವೆ. ಪಕ್ಷದ ಸಂಘಟನೆಯತ್ತ ಹೆಚ್ಚು ಗಮನ ಹರಿಸುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.