ರಾಜಕೀಯ

ಉಪಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳುವುದಿಲ್ಲ: ಎಚ್.ಡಿ. ಕುಮಾರಸ್ವಾಮಿ

ಶಿರಾ ಮತ್ತು ಆರ್ ಆರ್ ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿಯ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಿಎಂ ಎಚ್ .ಡಿ ಕುಮಾರಸ್ವಾಮಿ ಸ್ಪಷ್ಟ ಪಡಿಸಿದ್ದಾರೆ.

ಉಪಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳುವುದಿಲ್ಲ: ಎಚ್.ಡಿ. ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ
Published On :

ಬೆಂಗಳೂರು: ಶಿರಾ ಮತ್ತು ಆರ್ ಆರ್ ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿಯ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಿಎಂ ಎಚ್ .ಡಿ ಕುಮಾರಸ್ವಾಮಿ ಸ್ಪಷ್ಟ ಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆರ್​.ಆರ್​. ನಗರ ಕ್ಷೇತ್ರದ ಕಾರ್ಯಕರ್ತರು, ಮುಖಂಡರು ಮತ್ತು ಟಿಕೆಟ್ ಆಕಾಂಕ್ಷಿಗಳ ಜೊತೆ ಸಭೆ ನಡೆಸಿ, ಮಾಹಿತಿ ಪಡೆಯಲಾಗಿದೆ. ಶೀಘ್ರದಲ್ಲೇ ಜೆಡಿಎಸ್​ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಲಾಗುವುದು. ರಾಷ್ಟ್ರೀಯ ಪಕ್ಷಗಳನ್ನು ಮಣಿಸುವುದೇ ನಮ್ಮ ಗುರಿ ಎಂದು ಹೆಚ್​.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಕಾಂಗ್ರೆಸ್ ನಾಯಕರು ಈಗಾಗಲೇ ಮೈತ್ರಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ನಾಯಕರ ಹೇಳಿಕೆಗಳನ್ನು ನಾನು ಗಮನಿಸಿದ್ದೇನೆ. ನಮ್ಮ ಪಕ್ಷದಿಂದ ಏಕಾಂಗಿ ಸ್ಪರ್ಧೆ   ಮಾಡುತ್ತೇವೆ. ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.