ಅಮಿತ್ ಶಾ ಅಪಾಯಿಂಟ್ಮೆಂಟ್ ಕೊಟ್ಟ ತಕ್ಷಣ ದೆಹಲಿಗೆ ತೆರಳುತ್ತೇನೆ: ಸಿಎಂ ಯಡಿಯೂರಪ್ಪ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಪಾಯಿಂಟ್ಮೆಂಟ್ ಕೊಟ್ಟ ತಕ್ಷಣವೇ ದೆಹಲಿಗೆ ತೆರಳಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚೆರ್ಚೆ ನಡೆಸುತ್ತೇನೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಶುಕ್ರವಾರ ತಿಳಿಸಿದ್ದಾರೆ.

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಪಾಯಿಂಟ್ಮೆಂಟ್ ಕೊಟ್ಟ ತಕ್ಷಣವೇ ದೆಹಲಿಗೆ ತೆರಳಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚೆರ್ಚೆ ನಡೆಸುತ್ತೇನೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಶುಕ್ರವಾರ ತಿಳಿಸಿದ್ದಾರೆ.
ಇಂದು ವಿಧಾನಸೌಧದಲ್ಲಿ ಸಚಿವ ಸಂಪುಟ ವಿಸ್ತರಣೆಗೆ ದೆಹಲಿಗೆ ತೆರಳುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅಮಿತ್ ಶಾ ಅವರ ಭೇಟಿಗೆ ಟೈಮ್ ಕೇಳಿದ್ದೇನೆ. ಅವರು ಅಪಾಯಿಂಟ್ಮೆಂಟ್ ಕೊಟ್ಟ ತಕ್ಷಣ ದೆಹಲಿಗೆ ತೆರಳುತ್ತೇನೆ ಎಂದು ಸ್ಪಷ್ಟಪಡಿಸಿದರು.
ಸಿಎಂ ಯಡಿಯೂರಪ್ಪ ಅವರು ಸಚಿವ ಸಂಪುಟ ವಿಸ್ತರಣೆ ಸಂಬಂಧ ಈಗಾಗಲೇ ಒಂದು ಬಾರಿ ದೆಹಲಿಗೆ ಹೋಗಿ ವರಿಷ್ಠರ ಜೊತೆ ಮಾತನಾಡಿ ಬಂದಿದ್ದಾರೆ. ಆದರೆ ಇದುವರೆಗೂ ಸಂಪುಟ ವಿಸ್ತರಣೆಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ ಈಗ ಮತ್ತೆ ದೆಹಲಿಗೆ ಹೋಗಲು ಸಿದ್ಧರಾಗಿದ್ದು, ಅಮಿತ್ ಶಾ ಅವರ ಅಪಾಯಿಂಟ್ಮೆಂಟ್ ಕೇಳಿದ್ದಾರೆ.
ಶಿರಾ ಹಾಗೂ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿರುವುದರಿಂದ ಸದ್ಯಕ್ಕೆ ಸಂಪುಟ ವಿಸ್ತರಣೆ ಮಾಡುವುದು ಅನುಮಾನ. ಆದರೂ ದೆಹಲಿಗೆ ಭೇಟಿ ನೀಡಿ ವರಿಷ್ಠಿರೊಂದಿಗೆ ಮಾತುಕತೆ ನಡೆಸಿದ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


