ಬೆಳಗಾವಿ, ಮಸ್ಕಿ, ಬಸವ ಕಲ್ಯಾಣ ಅಭ್ಯರ್ಥಿಗಳ ಆಯ್ಕೆಗೆ ಮತ್ತೊಮ್ಮೆ ಕೋರ್ ಕಮಿಟಿ ಸಭೆ- ಜಗದೀಶ್ ಶೆಟ್ಟರ್
ಬೆಳಗಾವಿ ಲೋಕಸಭಾ ಹಾಗೂ ಮಸ್ಕಿ,ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಉಪ ಚುನಾವಣಾ ದಿನಾಂಕ ಘೋಷಣೆಯಾದ ನಂತರ ಮತ್ತೆ ಕೋರ್ ಕಮಿಟಿ ಸಭೆ ಸೇರಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಬೆಳಗಾವಿ ಲೋಕಸಭಾ ಹಾಗೂ ಮಸ್ಕಿ,ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಉಪ ಚುನಾವಣಾ ದಿನಾಂಕ ಘೋಷಣೆಯಾದ ನಂತರ ಮತ್ತೆ ಕೋರ್ ಕಮಿಟಿ ಸಭೆ ಸೇರಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ.
ಸರ್ಕಾರಿ ನಿವಾಸದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಪಕ್ಷದ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ದಿನಾಂಕ ನಿಗದಿ ಆಗದ ಕಾರಣ ಬಹಳ ಚರ್ಚೆ ಆಗಿಲ್ಲ ಆರ್ ಆರ್. ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರ, ಎರಡು ಶಿಕ್ಷಕರ ಹಾಗೂ ಎರಡು ಪದವೀಧರ ಕ್ಷೇತ್ರಗಳ ಕುರಿತು ಮಾತ್ರ ಚರ್ಚೆ ಆಗಿದೆ ಅಭ್ಯರ್ಥಿಗಳ ಹೆಸರು ಕುರಿತು ಸುದೀರ್ಘ ಚರ್ಚೆ ನಡೆಸಿ ಹೈಕಮಾಂಡ್ ಗೆ ಹೆಸರುಗಳನ್ನು ಕಳಿಸಿಕೊಡಲು ನಿರ್ಧರಿಸಲಾಯಿತು ಎಂದರು.
ಬೆಳಗಾವಿ, ಮಸ್ಕಿ, ಬಸವ ಕಲ್ಯಾಣ ಕ್ಷೇತ್ರಗಳ ಚುನಾವಣಾ ದಿನಾಂಕ ಪ್ರಕಟ ಆದ ನಂತರ ಮತ್ತೊಮ್ಮೆ ಕೋರ್ ಕಮಿಟಿ ಸಭೆ ನಡೆಸಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


