ರಾಜಕೀಯ

ಆರ್ ಆರ್ ನಗರಕ್ಕೆ ಮುನಿರತ್ನ ಅಭ್ಯರ್ಥಿಯಾಗಲು ಕೋರ್ ಕಮಿಟಿಯಲ್ಲಿ ನಿರ್ಧಾರ: ಬಿಜೆಪಿ ಉಸ್ತುವಾರಿಗಳ ನೇಮಕ

ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಮಹತ್ವದ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಿತು.

ಆರ್ ಆರ್ ನಗರಕ್ಕೆ ಮುನಿರತ್ನ ಅಭ್ಯರ್ಥಿಯಾಗಲು ಕೋರ್ ಕಮಿಟಿಯಲ್ಲಿ ನಿರ್ಧಾರ: ಬಿಜೆಪಿ ಉಸ್ತುವಾರಿಗಳ ನೇಮಕ
ಮುನಿರತ್ನ
Published On :

ಬೆಂಗಳೂರು: ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಮಹತ್ವದ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಿತು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ನಡೆದ ಕೋರ್ ಕಮಿಟಿ ಸಬೆಯಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ನಗರ ಹಾಗೂ ತುಮಕೂರು ಜಿಲ್ಲೆ ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಮಾಡಲಾಗಿದೆ.

ಬಿಜೆಪಿ ಸರ್ಕಾರ ರಚಿಸಲು ಕಾರಣವಾದ 15 ಕಾಂಗ್ರೆಸ್ -ಜೆಡಿಎಸ್ ಶಾಸಕರುಗಳ ಪೈಕಿ ಮುನಿರತ್ನ ಕೂಡ ಇದ್ದರು.  ಹೀಗಾಗಿ ಆರ್ ಆರ್ ನಗರಕ್ಕೆ ಮುನಿರತ್ನ ಅವರಿಗೆ ಟಿಕೆಟಿ ನೀಡಲು ಬಿಜೆಪಿ ಕೋರ್ ಕಮಿಟಿ ಸಭೆಲ್ಲಿ ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹೀಗಾಗಿ 2 ವಿಧಾನಸಬೆ ಮತ್ತು 2 ವಿಧಾನ ಪರಿಷತ್ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಪಟ್ಟಿ ಮಾಡಿ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

ಶಿರಾ ಕ್ಷೇತ್ರಕ್ಕೆ ಕಾಂಗ್ರೆಸ್ ಮಾಜಿ ಸಂಸದ ಸಿಪಿ ಮೂಡಲಗಿರಿಯಪ್ಪ ಅವರ ಪುತ್ರ ರಾಜೇಶ್ ಗೌಡ ಹೆಸರನ್ನು ಶಿಫಾರಸ್ಸು ಮಾಡಲಾಗಿದೆ, ಇದರ ಜೊತೆಗೆ ಎಸ್ ಆರ್ ಗೌಡ ಮತ್ತು ಬಿಕೆ ಮಂಜುನಾಥ್ ಅವರ ಹೆಸರುಗಳು ಕೂಡ ಕೇಳಿ ಬರುತ್ತಿವೆ. ಗೊಲ್ಲ ಸಮುದಾಯದ ಸಂಖ್ಯೆ ಅಧಿಕವಾಗಿರುವ ಶಿರಾ ಕ್ಷೇತ್ರಕ್ಕೆ ಒಕ್ಕಲಿಗ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಸೂಕ್ತ ಎಂದು ಸಭೆಯಲ್ಲಿ ನಿರ್ಧರಿಸಲಾಗಿದೆ.

ರಾಜ ರಾಜೇಶ್ವರಿ ನಗರದಲ್ಲಿ ಬಿಜೆಪಿ ಬಹುತೇಕ ಪ್ರಬಲವಾಗಿದೆ, ಆದರೆ ಶಿರಾ ಕ್ಷೇತ್ರದ್ದೇ ಸದ್ಯಕ್ಕೆ ಸಮಸ್ಯೆ, ಶಿರಾ ವಿಧಾನ ಸಭಾ ಕ್ಷೇತ್ರದಲ್ಲಿ ಹಿಂದೆ ಜೆಡಿಎಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದರು. ಹೀಗಾಗಿ ಶಿರಾ ಕ್ಷೇತ್ರವೊಂದಕ್ಕೆ 8 ಮಂದಿಯನ್ನು ಉಸ್ತುವಾರಿಯಾಗಿ ನೇಮಿಸಲಾಗಿದೆ. 

ಶಿರಾ ಕ್ಷೇತ್ರ – ಡಿಸಿಎಂ ಗೋವಿಂದ ಕಾರಜೋಳ, ಡಿಸಿಎಂ ಡಾ.ಅಶ್ವಥ ನಾರಾಯಣ, ಎನ್ ರವಿಕುಮಾರ್, ಬಿ ವೈ ವಿಜಯೇಂದ್ರ, ಸಂಸದ ಪಿ ಸಿ ಮೋಹನ್, ಎ ನಾರಾಯಣಸ್ವಾಮಿ, ಪೂರ್ಣಿಮಾ ಶ್ರೀನಿವಾಸ್ ಮತ್ತು ತಿಪ್ಪೇಸ್ವಾಮಿ, ಉಸ್ತುವಾರಿಗಳು

ಆರ್ ಆರ್ ನಗರ ಕ್ಷೇತ್ರ- ಸಚಿವರಾದ ಬೈರತಿ ಬಸವರಾಜು, ಎಸ್ ಟಿ ಸೋಮಶೇಖರ್, ಆರ್ ಅಶೋಕ್, ಶಾಸಕ ಅರವಿಂದ ಲಿಂಬಾವಳಿ, ಎಸ್ ಆರ್ ವಿಶ್ವನಾಥ್ ಉಸ್ತುವಾರಿಗಳು

ಬೆಂಗಳೂರು ಶಿಕ್ಷಕರ ಕ್ಷೇತ್ರ – ಸಚಿವ ಸುರೇಶ್ ಕುಮಾರ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಉಸ್ತುವಾರಿಗಳು

ಆಗ್ನೇಯ ಪದವೀಧರ ಕ್ಷೇತ್ರ – ಸಚಿವ ಮಾಧುಸ್ವಾಮಿ,   ಸಚಿವ ಸುಧಾಕರ್, ವೈ ಎ ನಾರಾಯಣ ಸ್ವಾಮಿ ಮತ್ತು ಡಾ.ಶಿವಯೋಗಿ ಸ್ವಾಮಿ ಉಸ್ತುವಾರಿಗಳು

ಪಶ್ಚಿಮ ಪದವೀಧರ ಕ್ಷೇತ್ರ – ಸಚಿವ ಜಗದೀಶ್ ಶೆಟ್ಟರ್, ಸಚಿವ ಶಿವರಾಮ ಹೆಬ್ಬಾರ್, ಮಹೇಶ್ ತೆಂಗಿನಕಾಯಿ ಉಸ್ತುವಾರಿಗಳು

ಈಶಾನ್ಯ ಶಿಕ್ಷಕರ ಕ್ಷೇತ್ರ – ಕೆ ಎಸ್ ಈಶ್ವರಪ್ಪ, ಶಶಿಕಲಾ ಜೊಲ್ಲೆ, ಮಹಾಂತೇಶ್ ಕವಟಗಿಮಠ ಉಸ್ತುವಾರಿಗಳು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.