ಶಿರಾದಲ್ಲಿ ಚುನಾವಣಾ ಪ್ರಚಾರ ಕಾರ್ಯ ಆರಂಭಿಸಿದ ಬಿಜೆಪಿ: ಸಿದ್ದರಾಮಯ್ಯ ವಿರುದ್ಧ ತೀವ್ರ ಕಿಡಿ
ಶಿರಾ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು ಈ ನಡುವಲ್ಲೇ ರಾಜ್ಯ ಬಿಜೆಪಿಯು ತನ್ನ ಚುನಾವಣಾ ಪ್ರಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಿದೆ.

ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರ ಉಪ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು ಈ ನಡುವಲ್ಲೇ ರಾಜ್ಯ ಬಿಜೆಪಿಯು ತನ್ನ ಚುನಾವಣಾ ಪ್ರಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಿದೆ.
ತಾಲೂಕಿನ ಚಿಕ್ಕನಹಳ್ಳಿ ಬಳಿ ಕಳ್ಳಂಬೆಳ್ಳ ಹಾಗೂ ಚಿಕ್ಕನಹಳ್ಳಿ ರ್ಯಾಲಿಗೆ ಚಾಲನೆ ನೀಡಿದ ಬಳಿಕ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ಅವರು ಹಿಂದೂ ವಿರೋಧಿಯಾಗಿದ್ದು, ಹಿಂದೂಗಳ ಮೇಲೆ ದಾಳಿ ನಡೆಸಿದ್ದ ಎಸ್'ಡಿಪಿಐ ಕಾರ್ಯಕರ್ತರ ವಿರುದ್ಧದ ಪ್ರಕರಣಗಳನ್ನು ತಾವು ರಾಜ್ಯ ಮುಖ್ಯಮಂತ್ರಿಯಾಗಿದ್ದಾಗ ರದ್ದುಪಡಿಸಿದ್ದರು ಎಂದು ಕಿಡಿಕಾರಿದ್ದಾರೆ.
ಸಂಸದ ಪ್ರತಾಪ್ ಸಿಂಹ ಮಾತನಾಡಿ, ಹಿಂದೂಗಳ ಭಾವನೆಗಳ ಮೇಲೆ ಪರಿಣಾಮ ಬೀರಿದ್ದ ಮತ್ತು ಕೋಮು ಹಿಂಸಾಚಾರವನ್ನು ಪ್ರಚೋದಿಸಿದ್ದ ಟಿಪ್ಪು ಜಯಂತಿ ಆಚರಣೆ ಪರ ಸಿದ್ದರಾಮಯ್ಯ ಒಲವು ತೋರಿದ್ದರು. ಅಲ್ಪಸಂಖ್ಯಾತರನ್ನು ಸಮಾಧಾನಪಡಿಸಲು ಟಿಪ್ಪು ವಿಚಾರ ತೆಗೆದುಕೊಂಡಿದ್ದರು ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


