ರಾಜರಾಜೇಶ್ವರಿ ನಗರ ಉಪಚುನಾವಣೆ: ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಮೂವರ ಹೆಸರು
ನವೆಂಬರ್ 3 ರಂದು ನಡೆಯಲಿರುವ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗಾಗಿ ಜೆಡಿಎಸ್ ಶುಕ್ರವಾರ ಮೂವರು ಸಂಭಾವ್ಯ ಅಭ್ಯರ್ಥಿಗಳನ್ನೊಳಗೊಂಡ ಕಿರುಪಟ್ಟಿಯೊಂದನ್ನು ಸಿದ್ಧಪಡಿಸಿದೆ.

ಬೆಂಗಳೂರು: ನವೆಂಬರ್ 3 ರಂದು ನಡೆಯಲಿರುವ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗಾಗಿ ಜೆಡಿಎಸ್ ಶುಕ್ರವಾರ ಮೂವರು ಸಂಭಾವ್ಯ ಅಭ್ಯರ್ಥಿಗಳನ್ನೊಳಗೊಂಡ ಕಿರುಪಟ್ಟಿಯೊಂದನ್ನು ಸಿದ್ಧಪಡಿಸಿದೆ.
ಜೆಡಿಎಸ್ ಶಾಸಕಾಂಗ ಪಕ್ಷದ ಮುಖಂಡ ಎಚ್ ಡಿ ಕುಮಾರಸ್ವಾಮಿ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಈ ಹಿಂದೆ ಆಯ್ಕೆ ಮಾಡಲಾಗಿದ್ದ ಜಿ.ಹೆಚ್. ರಾಮಚಂದ್ರ ಬದಲಿಗೆ ಸ್ಥಳೀಯ ಕಾರ್ಯಕರ್ತರು, ಬ್ಲಾಕ್ ಪದಾಧಿಕಾರಿಗಳ ಹೆಸರುಗಳನ್ನು ಕಿರುಪಟ್ಟಿಯಲ್ಲಿ ಸೇರಿಸಲಾಯಿತು.
ಬೆಂಗಳೂರು ನಗರ ಜೆಡಿಎಸ್ ಅಧ್ಯಕ್ಷ ಪ್ರಕಾಶ್, ಆರ್ ಆರ್ ನಗರ ಬ್ಲಾಕ್ ಅಧ್ಯಕ್ಷ ಬೆಟ್ಟಸ್ವಾಮಿ ಗೌಡ ಮತ್ತು ಜ್ಞಾನಭಾರತಿ ಘಟಕದ ಮುಖ್ಯಸ್ಥ ಕೃಷ್ಣಮೂರ್ತಿ ಅವರ ಹೆಸರುಗಳು ಕಿರುಪಟ್ಟಿಯಲ್ಲಿದ್ದು, ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಅಂತಿಮವಾಗಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದ್ದಾರೆ.
ಸ್ಥಳೀಯ ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ನೀಡಲು ನಿರ್ಧರಿಸಿದ್ದೇವೆ. ಕಳೆದ ಎರಡು ಚುನಾವಣೆಗಳಲ್ಲಿ ಜೆಡಿಎಸ್ 50 ರಿಂದ 60 ಸಾವಿರ ಮತಗಳನ್ನು ಪಡೆದುಕೊಂಡಿದೆ. ಜನರು ಎರಡೂ ರಾಷ್ಟ್ರೀಯ ಪಕ್ಷಗಳಿಂದ ಬೇಸತ್ತಿದ್ದು, ಇದನ್ನು ಪಕ್ಷಕ್ಕಾಗಿ ಅವಕಾಶವಾಗಿ ಬಳಸಿಕೊಳ್ಳಲು ಎದುರು ನೋಡುತ್ತಿರುವುದಾಗಿ ಜೆಡಿಎಸ್ ವಿಧಾನಪರಿಷತ್ ಸದಸ್ಯ ಅಪ್ಪಾಜಿಗೌಡ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


