ದಿವಂಗತ ಐಎಎಸ್ ಅಧಿಕಾರಿ ಡಿಕೆ ರವಿ ಪತ್ನಿ ಎಚ್. ಕುಸುಮಾ ಕಾಂಗ್ರೆಸ್ ಗೆ ಸೇರ್ಪಡೆ
ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ ರವಿ ಅವರ ಪತ್ನಿ ಎಚ್. ಕುಸುಮಾ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರು: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ ರವಿ ಅವರ ಪತ್ನಿ ಎಚ್. ಕುಸುಮಾ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಕುಸುಮಾ ಅವರು ತಂದೆ ಹನುಮಂತರಾಯಪ್ಪ ಅವರೊಡನೆ ಕೆಪಿಸಿಸಿ ಕಚೇರಿಗೆ ಆಗಮಿಸಿದಾಗ ಕಾಂಗ್ರೆಸ್ ಕಾರ್ಯಕರ್ತರು ಅವರನ್ನು ಆದರದಿಂದ ಬರಮಾಡಿಕೊಂಡರು. ಬಳಿಕ ಕುಸುಮಾ ಅವರು ತಾವು ಪಕ್ಷಕ್ಕೆ ಸೇರ್ಪಡೆಯಾಗಿರುವ ಸಂಬಂಧ ಸದಸ್ಯತ್ವ ಅರ್ಜಿಯನ್ನು ಪಕ್ಷದ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ನಿಡೀದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಡಿಸಿಎಂ ಜಿ. ಪರಮೇಶ್ವರಿನ್ನೂ ಮೊದಲಾದ ನಾಯಕರು ಈ ಸಂದರ್ಭ ಹಾಜರಿದ್ದರು.
ಸಧ್ಯದಲ್ಲೇ ಬೆಂಗಳೂರು ರಾಜರಾಜೇಶ್ವರಿ ನಗರ ಹಾಗೂ ತುಮಕೂರಿನ ಶಿರಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿರುವ ಹಿನ್ನೆಲೆ ಡಿಕೆ ರವಿ ಅವರ ಪತ್ನಿ ಕುಸುಮಾ ಅವರ ಕಾಂಗ್ರೆಸ್ ಸೇರ್ಪಡೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


