ರಾಜಕೀಯ

ರಂಗೇರುತ್ತಿದೆ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ: ನಾಲ್ಕು ಅಭ್ಯರ್ಥಿಗಳ ಪ್ರಬಲ ಪೈಪೋಟಿ

ವಿಧಾನ ಪರಿಷತ್ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಆಗ್ನೇಯ ಪದವೀಧರ ಕ್ಷೇತ್ರಕ್ಕೆ ನಾಲ್ಕು ಅಭ್ಯರ್ಥಿಗಳು ಕಣಕ್ಕಿಳಿಯುವ ಸಾಧ್ಯತೆಯಿದೆ.

ರಂಗೇರುತ್ತಿದೆ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ: ನಾಲ್ಕು ಅಭ್ಯರ್ಥಿಗಳ ಪ್ರಬಲ ಪೈಪೋಟಿ
ಚೌಡರೆಡ್ಡಿ ಪ್ರಚಾರ
Published On :

ಚಿತ್ರದುರ್ಗ/ ದಾವಣಗೆರೆ: ವಿಧಾನ ಪರಿಷತ್ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಆಗ್ನೇಯ ಪದವೀಧರ ಕ್ಷೇತ್ರಕ್ಕೆ ನಾಲ್ಕು ಅಭ್ಯರ್ಥಿಗಳು ಕಣಕ್ಕಿಳಿಯುವ ಸಾಧ್ಯತೆಯಿದೆ.

ಜೆಡಿಎಸ್ ಗೆಲ್ಲುವ ಅಭ್ಯರ್ಥಿಯನ್ನು ಕಣಕ್ಕಿಳಿಸಿಲು ಸಿದ್ಧತೆ ನಡೆಸುತ್ತಿದೆ, ಕಳೆದ ಬಾರಿ ಬಿಜೆಪಿಯ ಡಾ.ಶಿವಯೋಗಿಸ್ವಾಮಿ ಅವರನ್ನು ಉತ್ತಮ ಅಂತರದಿಂದ ಸೋಲಿಸಿದ್ದ ಚೌಡರೆಡ್ಡಿ ತೋಪಳ್ಳಿ ಅವರನ್ನು ಕಣಕ್ಕಿಳಿಸಲಿದೆ, ಶಿಕ್ಷಕರ ಕ್ಷೇತ್ರದಿಂದ ಗೆಲುವು ಸಾಧಿಸಿದ್ದ ಕಾಂಗ್ರೆಸ್ ನ ರಮೇಶ್ ಬಾಬು ಅಭ್ಯರ್ಥಿಯಾಗುವ ಸಾಧ್ಯತೆಯಿದೆ.

ಬಿಜೆಪಿ ಹಿರಿಯೂರು ಶಾಸಕಿ ಪೂರ್ಣಿಮಾ ಅವರ ಪತಿ ಶ್ರೀನಿವಾಸ್ ರನ್ನು ಕೈಬಿಟ್ಟು ಚಿದಾನಂದಗೌಡ ಅವರಿಗೆ ಮಣೆ ಹಾಕಿದೆ, ಹೀಗಾಗಿ ಆಕ್ರೋಶಗೊಂಡಿರುವ ಶ್ರೀನಿವಾಸ್ ಸ್ವತಂತ್ರ್ಯವಾಗಿ ಸ್ಪರ್ಧಿಸುವ ಸಾಧ್ಯತೆಯಿದೆ.

ಅಭ್ಯರ್ಥಿಗಳು ಈಗಾಗಲೇ ಕ್ಷೇತ್ರಗಳಾದ್ಯಂತ ಸಂಚರಿಸುತ್ತಿದ್ದು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆ-ಹರಿಹರದಲ್ಲಿ ಪ್ರಚಾರ ಮಾಡುತ್ತಿದ್ದಾರೆ.

ಅಕ್ಟೋಬರ್ 8 ರಂದು ಚೌಡರೆಡ್ಡಿ ಮತ್ತು ಅಕ್ಟೋಬರ್ 7 ರಂದು ಶ್ರೀನಿವಾಸ್ ನಾಮಪತ್ರ ಸಲ್ಲಿಸಲಿದ್ದಾರೆ.  ಆದರೆ ಕಾಂಗ್ರೆಸ್ ಅಧಿಕೃತವಾಗಿ ರಮೇಶ್ ಬಾಬು ಅವರ ಹೆಸರನ್ನು ಪ್ರಕಟಿಸಿಲ್ಲ.

ತಮ್ಮ ಆರು ವರ್ಷದ ಅವಧಿಯಲ್ಲಿ ಶಿಕ್ಷಕರ, ಉಪನ್ಯಾಸಕರ ಮತ್ತು ಪದವೀದರರ ಕಲ್ಯಾಣಕ್ಕಾಗಿ ಕೆಲಸ ಮಾಡಿದ್ದೇನೆ,ವೇತನ, ಬಡ್ತಿ, ಹೊಸ ಪಿಂಚಣಿ ಹಾಗೂ ಪದವೀದರರ ಸಬಲೀಕರಣ ಸೇರಿದಂತೆ ಹಲವು ವಿಷಯಗಳ ಬಗ್ಗೆ ಹೋರಾಟ ನಡೆಸಿದ್ದೇನೆ ಎಂದು ಚೌಡರೆಡ್ಡಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.