ಉಪ ಚುನಾವಣೆ: ಆರ್.ಆರ್.ನಗರಕ್ಕೆ ಎಚ್.ಕುಸುಮಾ, ಶಿರಾಕ್ಕೆ ಟಿ.ಬಿ.ಜಯಚಂದ್ರ ಕಾಂಗ್ರೆಸ್ ಅಭ್ಯರ್ಥಿ
ರಾಜ್ಯದ ಎರಡು ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ ಬುಧವಾರ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಬೆಂಗಳೂರು: ರಾಜ್ಯದ ಎರಡು ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ ಬುಧವಾರ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.
ಆರ್.ಆರ್ .ನಗರಕ್ಕೆ ಡಿ.ಕೆ.ರವಿ ಪತ್ನಿ ಎಚ್.ಕುಸುಮ ಮತ್ತು ಶಿರಾ ಕ್ಷೇತ್ರಕ್ಕೆ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರ ಹೆಸರನ್ನು ಆಯ್ಕೆ ಮಾಡಿ ಎಐಸಿಸಿ ಪ್ರಕಟಿಸಿದೆ.
ಎಐಸಿಸಿ ಚುನಾವಣಾ ಸಮಿತಿ ಕುಸುಮಾ ಅವರ ಹೆಸರನ್ನು ಅಧಿಕೃತವಾಗಿ ಆಯ್ಕೆ ಮಾಡಿದೆ. ಕೆಲ ದಿನಗಳ ಹಿಂದಷ್ಟೇ ಕುಸುಮಾ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದರು.
ಮುನಿರತ್ನ ಅವರ ರಾಜೀನಾಮೆ ಬಳಿಕ ತೆರವಾಗಿದ್ದ ಕ್ಷೇತ್ರಕ್ಕೆ ಇದೀಗ ಉಪಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸುಮಾ ಅವರ ಹೆಸರನ್ನು ಘೋಷಿಸಲಾಗಿದೆ.
ನವೆಂಬರ್ 3 ರಂದು ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


