ಅಕ್ಟೋಬರ್ 8 ರಂದು ಆರ್.ಆರ್.ನಗರ ಜೆಡಿಎಸ್ ಅಭ್ಯರ್ಥಿ ಘೋಷಣೆ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
ಇದೇ ಆಕ್ಟೋಬರ್ 8ರಂದು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ.

ಬೆಂಗಳೂರು: ಇದೇ ಆಕ್ಟೋಬರ್ 8ರಂದು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ.
ನಗರದ ಜೆ.ಪಿ.ಭವನದಲ್ಲಿ ನಡೆದ ವಿಧನಾಪರಿಷತ್‌ನ ನಾಲ್ಕು ಸ್ಥಾನಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ನ್ನು ಗೆಲ್ಲಿಸಿಕೊಳ್ಳುವ ನಿಟ್ಟಿನಲ್ಲಿ ತಂತ್ರ ರೂಪಿಸುವ ಕುರಿತು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳ ಅಭ್ಯರ್ಥಿಗಳು,ಆಯಾ ಕ್ಷೇತ್ರಗಳ ಮುಖಂಡರು, ಶಾಸಕರು ಸೇರಿದಂತೆ ಇತರರೊಂದಿಗೆ ಸಮಾಲೋಚನೆ ನಡೆಸಿದರು.ಪ್ರತಿಯೊಬ್ಬರ ಅಭಿಪ್ರಾಯಗಳನ್ನು ಪಡೆದ ದೇವೇಗೌಡ ಅವರು, ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಸೂಚನೆ ನೀಡಿದರು.
ಇದೇ ವೇಳೆ ಉಪ ಚುನಾವಣೆ ಕುರಿತು ಮಾತನಾಡಿದ ದೇವೇಗೌಡ ಅವರು, 'ಆರ್.ಆರ್.ನಗರ ಕ್ಷೇತ್ರದಲ್ಲಿಯೂ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ. ಈಗಾಗಲೇ ಮೂವರ ಹೆಸರು ಅಂತಿಮವಾಗಿದ್ದು, ಅದರಲ್ಲಿ ಒಬ್ಬರನ್ನು ಆಯ್ಕೆ ಮಾಡಲಾಗುವುದು.ಅ.8 ರಂದು ಅಭ್ಯರ್ಥಿ ಯಾರೆಂಬುದನ್ನು ನಿರ್ಣಯ ಮಾಡಲಾಗುವುದು. ಸೋಲು-ಗೆಲುವು ಬೇರೆ ವಿಚಾರ. ಅಭ್ಯರ್ಥಿಯನ್ನಂತೂ ಕಣಕ್ಕಿಳಿಸುವುದು ಖಚಿತವೆಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


