ಕಾಯ್ದೆ ದುರ್ಬಲಗೊಳಿಸಿ ರೈತರಿಗೆ ಮರಣಶಾಸನ ಬರೆಯಲು ಹೊರಟ ಕೇಂದ್ರ ಸರ್ಕಾರ: ಸುರ್ಜೇವಾಲ ಟೀಕಾಪ್ರಹಾರ
ಕೇಂದ್ರದ ಬಿಜೆಪಿ ನೇತೃತ್ವದ ಪ್ರಧಾನಿ ನರೇಂದ್ರಮೋದಿ ಸರ್ಕಾರ ಕೃಷಿ ಸಂಬಂಧಿತ ಕಾಯ್ದೆಗಳ ಮೂಲ ಸ್ವರೂಪವನ್ನೇ ತಿದ್ದುಪಡಿ ಮಾಡುವ ಮೂಲಕ ಅಂಬಾನಿ-ಅದಾನಿಗಳಿಗೆ ಅನುಕೂಲ ಮಾಡಿ ರೈತರಿಗೆ ಮರಣ ಶಾಸನ ಬರೆಯಲು ಮುಂದಾಗಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆರೋಪಿಸಿದ್ದಾರೆ.

ಮಂಡ್ಯ: ಕೇಂದ್ರದ ಬಿಜೆಪಿ ನೇತೃತ್ವದ ಪ್ರಧಾನಿ ನರೇಂದ್ರಮೋದಿ ಸರ್ಕಾರ ಕೃಷಿ ಸಂಬಂಧಿತ ಕಾಯ್ದೆಗಳ ಮೂಲ ಸ್ವರೂಪವನ್ನೇ ತಿದ್ದುಪಡಿ ಮಾಡುವ ಮೂಲಕ ಅಂಬಾನಿ-ಅದಾನಿಗಳಿಗೆ ಅನುಕೂಲ ಮಾಡಿ ರೈತರಿಗೆ ಮರಣ ಶಾಸನ ಬರೆಯಲು ಮುಂದಾಗಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆರೋಪಿಸಿದ್ದಾರೆ.
ಮಂಡ್ಯದ ಅಂಬೇಡ್ಕರ್ ಭವನದಲ್ಲಿ ನಡೆದ ರೈತ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 2014ರಲ್ಲಿ ಕೇಂದ್ರದಲ್ಲಿ ಯುಪಿಎ ಸರ್ಕಾರ ಇದ್ದಾಗ ರೈತರ ಭೂಸ್ವಾಧೀನ ಕಾಯ್ದೆ ರೈತರಿಗೆ ಭದ್ರತೆ ಒದಗಿಸಿತ್ತು. ಆದರೆ ನಂತರ ಬಂದ ಮೋದಿ ಸರ್ಕಾರ ರೈತರ ಈ ಹಕ್ಕುಗಳನ್ನು ಮೊಟಕುಗೊಳಿಸಿ ಅವರನ್ನು ದುರ್ಬಲ ಮಾಡಲು ಹೊರಟಿದೆ ಎಂದು ಕಿಡಿಕಾರಿದರು.
ಕನಿಷ್ಠ ಬೆಂಬಲ ಬೆಲೆ ಕೂಡ ರದ್ದು ಮಾಡಲು ಕೇಂದ್ರ ಸರ್ಕಾರ ಹೊರಟಿದೆ. ಆ ಮೂಲಕ ಕೈಗಾರೀಕರಣ ಮತ್ತು ಖಾಸಗೀಕರಣಕ್ಕೆ ಕೆಂಪು ಹಾಸು ಹಾಸಿದೆ. ಇದನ್ನು ಪ್ರತಿಯೊಬ್ಬರೂ ವಿರೋಧಿಸಬೇಕಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


