ಡಾ.ಸುಧಾಕರ್ ಗೆ ವೈದ್ಯಕೀಯ ಶಿಕ್ಷಣ ಜೊತೆಗೆ ಆರೋಗ್ಯ, ಶ್ರೀರಾಮುಲುಗೆ ಸಮಾಜ ಕಲ್ಯಾಣ ಇಲಾಖೆ ಉಸ್ತುವಾರಿ
ರಾಜ್ಯದ ಎರಡು ಕ್ಷೇತ್ರಗಳಲ್ಲಿ ಉಪ ಚುನಾವಣೆ, ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಾಚನೆ ಸುದ್ದಿಗಳ ಮಧ್ಯೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಕೆಲವು ಸಚಿವರುಗಳ ಖಾತೆಗಳನ್ನು ಬದಲಾವಣೆ ಮಾಡಿದ್ದು, ರಾಜ್ಯಪಾಲ ವಜುಭಾಯಿ ವಾಲಾ ಸರ್ಕಾರದ ಆದೇಶಕ್ಕೆ ಸಹಿ ಹಾಕಿದ್ದಾರೆ.

ಬೆಂಗಳೂರು: ರಾಜ್ಯದ ಎರಡು ಕ್ಷೇತ್ರಗಳಲ್ಲಿ ಉಪ ಚುನಾವಣೆ, ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಾಚನೆ ಸುದ್ದಿಗಳ ಮಧ್ಯೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಪ್ರಮುಖ ಇಬ್ಬರು ಸಚಿವರುಗಳ ಖಾತೆಗಳನ್ನು ಬದಲಾವಣೆ ಮಾಡಿದ್ದು, ರಾಜ್ಯಪಾಲ ವಜುಭಾಯಿ ವಾಲಾ ಸರ್ಕಾರದ ಆದೇಶಕ್ಕೆ ಸಹಿ ಹಾಕಿದ್ದಾರೆ.
ಕೋವಿಡ್-19 ಪ್ರಕರಣಗಳು ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹೆಚ್ಚಾಗುತ್ತಿರುವುದರ ಮಧ್ಯೆ ಆರೋಗ್ಯ ಖಾತೆಯ ಹೆಚ್ಚುವರಿ ಉಸ್ತುವಾರಿಯನ್ನು ಕೂಡ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಹೆಗಲಿಗೆ ಸಿಎಂ ಹಾಕಿದ್ದಾರೆ. ಆರೋಗ್ಯ ಸಚಿವರಾಗಿದ್ದ ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಇಲಾಖೆ ಖಾತೆ ನೀಡಲಾಗಿದೆ. ಅವರ ಬಳಿಯಿದ್ದ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯನ್ನು ಸಿಎಂ ವಾಪಸ್ ಪಡೆದುಕೊಂಡಿದ್ದಾರೆ.
ಇನ್ನು ಉಪ ಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಖಾತೆ ಹೊತ್ತಿದ್ದ ಗೋವಿಂದ ಎಂ ಕಾರಜೋಳ ಅವರಿಗೆ ಲೋಕೋಪಯೋಗಿ ಖಾತೆಯನ್ನು ಉಳಿಸಲಾಗಿದೆ.
ಇದೀಗ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಬಳಿ ಡಿಪಿಎಆರ್, ಹಣಕಾಸು, ಬೆಂಗಳೂರು ಅಭಿವೃದ್ಧಿ, ಇಂಧನ, ಗೃಹ ಇಲಾಖೆಯ ಗುಪ್ತಚರ ವಿಭಾಗ, ಯೋಜನೆ, ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ, ಸಣ್ಣ ಪ್ರಮಾಣ ಕೈಗಾರಿಕೆ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಮತ್ತು ಇತರ ಎಲ್ಲಾ ಹಂಚಿಕೆ ಮಾಡದಿರುವ ಖಾತೆಗಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


