ಬೆಂಗಳೂರು ಆಸ್ತಿ ತೆರಿಗೆ ಹೆಚ್ಚಳ ಮಾಡದಿರಿ: ಸರ್ಕಾರಕ್ಕೆ ಕಾಂಗ್ರೆಸ್ ಆಗ್ರಹ
ಕೊರೋನಾದಿಂದಾಗಿ ಜನರು ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿತೆರಿಗೆ ಹೆಚ್ಚಳದ ಹೊರೆ ಹೊರಿಸುವ ಬದಲು ಹಾಲಿ ತೆರಿಗೆಯನ್ನೇ ಕಡಿಮೆ ಮಾಡಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

ಬೆಂಗಳೂರು: ಕೊರೋನಾದಿಂದಾಗಿ ಜನರು ಸಂಕಷ್ಟದಲ್ಲಿರುವ ಹಿನ್ನೆಲೆಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿತೆರಿಗೆ ಹೆಚ್ಚಳದ ಹೊರೆ ಹೊರಿಸುವ ಬದಲು ಹಾಲಿ ತೆರಿಗೆಯನ್ನೇ ಕಡಿಮೆ ಮಾಡಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಬಿಬಿಎಂಪಿ ಪ್ರಸ್ತಾಪಿಸಿರುವ ಆಸ್ತಿ ತೆರಿಗೆ ಹೆಚ್ಚಳವನ್ನು ಜಾರಿಗೆ ತಂದಿದ್ದೇ ಆದರೆ, ಬೆಂಗಳೂರು ನಗರದ ಅಭಿವೃದ್ಧಿಯನ್ನು ನಾಶ ಮಾಡುತ್ತದೆ ಎಂದು ಹೇಳಿದ್ದಾರೆ.
ಆಸ್ತಿ ತೆರಿಗೆ ಹೆಚ್ಚಳ ಮಾಡಿದರೆ ಬಾಡಿಗೆ ದರ ಹೆಚ್ಚಾಗುತ್ತದೆ, ಇದರಿಂದ ಮನೆ ಹಾಗೂ ಅಂಗಡಿಗಳ ಬಾಡಿಗೆ ದರ ಹೆಚ್ಚಳವಾಗಿ ಸಾರ್ವಜನಿಕರು, ವ್ಯಾಪಾರಿಗಳು ಸಮಸ್ಯೆ ಎದುರಿಸವಂತಾಗುತ್ತದೆ. ಆಸ್ತಿ ತೆರಿಗೆ ಕಡಿಮೆ ಮಾಡಿದರೆ ಬಾಡಿಗೆ ದರಗಳು ಕಡಿಮೆಯಾಗಿ ಬಡವರು ಹಾಗೂ ಮಧ್ಯಮ ವರ್ಗದವರಿಗೆ ಮನೆಗಳು ಕೈಗೆಟಕುವಂತಾಗುತ್ತದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


