ರಾಜಕೀಯ

ಅಕ್ಟೋಬರ್ 25 ರಂದು ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಕಳೆದ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿರುವ ಶಾಸಕ ಶರತ್ ಬಚ್ಚೇಗೌಡ ಅವರು ಇದೇ ಅಕ್ಟೋಬರ್ 25 ರಂದು ಕಾಂಗ್ರೆಸ್ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಕ್ಟೋಬರ್ 25 ರಂದು ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ
ಶರತ್ ಬಚ್ಚೇಗೌಡ
Published On :

ಬೆಂಗಳೂರು: ಕಳೆದ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿರುವ ಶಾಸಕ ಶರತ್ ಬಚ್ಚೇಗೌಡ ಅವರು ಇದೇ ಅಕ್ಟೋಬರ್ 25 ರಂದು ಕಾಂಗ್ರೆಸ್ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಗೆ ಸ್ಥಳೀಯ ಮುಖಂಡರು ಒಪ್ಪಿಗೆ ಸೂಚಿಸಿದ್ದು, ಅಕ್ಟೋಬರ್ 25 ಕ್ಕೆ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಿಸಿಕೊಂಡು ಬರಲು ತಕ್ಷಣ ಕಾಂಗ್ರೆಸ್ ಸೇರ್ಪಡೆಗೆ ನಾಯಕರು ಒಲವು ತೋರಿದ್ದಾರೆನ್ನಲಾಗಿದೆ.

ಕಳೆದ ಉಪ ಚುನಾವಣೆಯಲ್ಲಿ ಜಿದ್ದಾ ಜಿದ್ದಿನ ಕಣದಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಹೋಗಿ ಸ್ಪರ್ಧಿಸಿದ್ದ ಎಂಟಿಬಿ ನಾಗರಾಜ್‌ ವಿರುದ್ಧ ಶರತ್‌ ಬಚ್ಚೇಗೌಡ ಭರ್ಜರಿ ಗೆಲುವು ದಾಖಲಿಸಿದ್ದರು. ಶರತ್‌ ಗೆಲುವಿಗೆ ಜೆಡಿಎಸ್‌ನ ಪರೋಕ್ಷ ಬೆಂಬಲವೂ ಇತ್ತು ಎಂದು ಹೇಳಲಾಗಿತ್ತು. ಆದರೆ, ಈಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಹ್ವಾನದ ಮೇರೆಗೆ ಕಾಂಗ್ರೆಸ್‌ ಸೇರುತ್ತಿದ್ದಾರೆ ಎಂದು ಮೂಲಗಳು ಖಚಿತ ಪಡಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.