2020ರಲ್ಲೇ ಗ್ರಾಮ ಪಂಚಾಯತ್ ಚುನಾವಣೆ ನಡೆಸಬೇಕು: ಸರ್ಕಾರಕ್ಕೆ ಆಯೋಗದ ಸೂಚನೆ
ರಾಜ್ಯ ಸರ್ಕಾರ ಮತ್ತೆ ಮತ್ತೆ ಗ್ರಾಮ ಪಂಚಾಯತ್ ಚುನಾವಣೆಯನ್ನು ಮುಂದೂಡುತ್ತಿರುವ ಹಿನ್ನೆಲೆಯಲ್ಲಿ, ಸರ್ಕಾರಕ್ಕೆ ಪತ್ರ ಬರೆದಿರುವ ರಾಜ್ಯ ಚುನಾವಣಾ ಆಯೋಗ 2020 ರಲ್ಲಿ ಕಡ್ಡಾಯವಾಗಿ ಚುನಾವಣೆ ನಡೆಸುವಂತೆ ಸೂಚಿಸಿದೆ.

ಬೆಂಗಳೂರು: ರಾಜ್ಯ ಸರ್ಕಾರ ಮತ್ತೆ ಮತ್ತೆ ಗ್ರಾಮ ಪಂಚಾಯತ್ ಚುನಾವಣೆಯನ್ನು ಮುಂದೂಡುತ್ತಿರುವ ಹಿನ್ನೆಲೆಯಲ್ಲಿ, ಸರ್ಕಾರಕ್ಕೆ ಪತ್ರ ಬರೆದಿರುವ ರಾಜ್ಯ ಚುನಾವಣಾ ಆಯೋಗ 2020 ರಲ್ಲಿ ಕಡ್ಡಾಯವಾಗಿ ಚುನಾವಣೆ ನಡೆಸುವಂತೆ ಸೂಚಿಸಿದೆ.
ಕೊರೋನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಗ್ರಾಮ ಪಂಚಾಯತ್ ಚುನಾವಣೆಯನ್ನು ಮುಂದೂಡುತ್ತಾ ಬಂದಿದೆ, ಆದರೆ 2020ರಲ್ಲೆ ಚುನಾವಣೆ ನಡೆಸಬೇಕು ಎಂದು ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದಾರೆ.
ಜೂನ್ ತಿಂಗಳಲ್ಲೇ ಗ್ರಾಮ ಪಂಚಾಯತ್ ಸದಸ್ಯರ ಅಧಿಕಾರಾವಧಿ ಮುಗಿದಿದ್ದು, ಸರ್ಕಾರ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿದೆ, ಆದರೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿದ ಆರು ತಿಂಗಳೊಳಗೆ ಚುನಾವಣೆ ನಡೆಸುವುದು ಕಡ್ಡಾಯವಾಗಿದೆ, ಈ ಸಂಬಂಧ ಹೈಕೋರ್ಟ್ ಗೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕೂಡ ಬಾಕಿ ಉಳಿದಿದೆ.
ಮುಂದಿನ ವರ್ಷದ ಆರಂಭದ ವೇಳೆಗೆ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಗಳ ಅಧಿಕಾರವಧಿ ಕೂಡ ಅಂತ್ಯವಾಗಲಿದೆ, ಹೀಗಾಗಿ ಅವುಗಳಿಗೂ ಕೂಡ ಚುನಾವಣೆ ನಡೆಸುವ ಅಗತ್ಯವಿದೆ, ಹಲವು ಹೊಸ ತಾಲೂಕುಗಳು ರಚನೆಯಾಗಿದ್ದು, ಚುನಾವಣಾ ಆಯೋಗ ಈ ಪಂಚಾಯತ್ ಗಳಿಗೆ ಮೀಸಲಾತಿ ನಿಗದಿ ಮಾಡಬೇಕಾಗಿದೆ, ಇದರ ಜೊತೆಗೆ ಬಿಬಿಎಂಪಿ ಚುನಾವಣೆ ಕೂಡ ನಡೆಸಬೇಕಾಗಿದೆ, ಎಲ್ಲಾ ಚುನಾವಣೆಗಳನ್ನು 2021ರಲ್ಲಿ ನಡೆಸಲು ಸಾಧ್ಯವಿಲ್ಲ, ಹೀಗಾಗಿ ಗ್ರಾಮ ಪಂಚಾತ್ ಚುನಾವಣೆಯನ್ನು ಮತ್ತೆ ಮುಂದೂಡದೇ 2020ರಲ್ಲಿಯೆ ನಡೆಸಬೇಕು ಎಂದು ಚುನಾವಣಾ ಆಯೋಗ ಸರ್ಕಾರಕ್ಕೆ ಪತ್ರದಲ್ಲಿ ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


