ಕುಸುಮಾ ವಿರುದ್ಧ ಎಫ್ ಐಆರ್ ಹೇಡಿತನ, ನೀಚತನದ ರಾಜಕಾರಣ: ಡಿಕೆಶಿ ಕೆಂಡಾಮಂಡಲ
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬೆಂಗಾವಲು ಪಡೆಯ ಸಿಬ್ಬಂದಿ ವಿರುದ್ಧ ಪೊಲೀಸ್ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬೆಂಗಾವಲು ಪಡೆಯ ಸಿಬ್ಬಂದಿ ವಿರುದ್ಧ ಪೊಲೀಸ್ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸದಾಶಿವ ನಗರದ ನಿವಾಸದಲ್ಲಿ ಇಂದು ತುರ್ತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆರ್‌ಆರ್ ನಗರದ ನಮ್ಮ ಪಕ್ಷದ ಅಭ್ಯರ್ಥಿ ಕುಸುಮಾ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ಹೇಡಿತನ, ನೀಚತನದ ರಾಜಕಾರಣವಾಗಿದೆ.ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯವನ್ನು ನಾವು ಸಹಿಸುವುದಿಲ್ಲ ಎಂದರು.
ಈಗಾಗಲೇ ಸಾಕಷ್ಟು ನೊಂದು ಬೆಂದಿರುವ ಹೆಣ್ಣು ಮಗಳನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದೇವೆ.ರಾಜಕಾರಣದಲ್ಲಿ ಕಣ್ಣು ಬಿಡುತ್ತಿರುವ ಅಭ್ಯರ್ಥಿ ಮೇಲೆ ಎಫ್‌ಐಆರ್ ದಾಖಲಿಸಿ ಪೊಲೀಸರು ಹಾಗೂ ಸರ್ಕಾರ ಅಧಿಕಾರದ ದುರ್ಬಳಕೆ ಮಾಡಿಕೊಂಡಿದೆ.ಇಂತಹ ನೀಚ ರಾಜಕಾರಣವನ್ನು ನಾನೆಂದೂ ನೋಡಿಲ್ಲ.ಇದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಕಿಡಿಕಾರಿದರು.
ಈ ಬಗ್ಗೆ ಮುಖ್ಯಮಂತ್ರಿ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿರುವ ಡಿಕೆಶಿ, ಎಫ್ಐಆರ್ ಪ್ರಕರಣದ ಬಗ್ಗೆ ಕಾನೂನಾತ್ಮಕವಾಗಿ ಹಾಗೂ ಚುನಾವಣಾ ಆಯೋಗಕ್ಕೂ ದೂರು ನೀಡಲಿದ್ದೇವೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


