ರಾಜರಾಜೇಶ್ವರಿ ನಗರ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಮುನಿರತ್ನ ಆಸ್ತಿ, ಸಾಲ ಎಷ್ಟು?
ರಾಜರಾಜೇಶ್ವರಿನ ನಗರ ವಿಧಾನಸಭಾ ಉಪಚುನಾವಣೆಗೆ ಸ್ಪರ್ಧಿಸಿರುವ ಮುನಿರತ್ನ ಅವರು 78 ಕೋಟಿ ರು. ಗಿಂತ ಹೆಚ್ಚು ಆಸ್ತಿ ಹೊಂದಿದ್ದು, ದ್ವಿಚಕ್ರ ವಾಹನ, ಕಾರು ಸೇರಿದಂತೆ ೩೦ ವಾಹನಗಳಿವೆ.ಚುನಾವಣಾಧಿಕಾರಿಗೆ ಬುಧವಾರ ಸಲ್ಲಿಕೆ ಮಾಡಿರುವ ಆಸ್ತಿ ವಿವರದಲ್ಲಿ ಮುನಿರತ್ನ ಅವರು ಈ ಬಗ್ಗೆ ಉಲ್ಲೇಖ ಮಾಡಿದ್ದಾರೆ.

ಬೆಂಗಳೂರು: ರಾಜರಾಜೇಶ್ವರಿನ ನಗರ ವಿಧಾನಸಭಾ ಉಪಚುನಾವಣೆಗೆ ಸ್ಪರ್ಧಿಸಿರುವ ಮುನಿರತ್ನ ಅವರು 78 ಕೋಟಿ ರು. ಗಿಂತ ಹೆಚ್ಚು ಆಸ್ತಿ ಹೊಂದಿದ್ದು, ದ್ವಿಚಕ್ರ ವಾಹನ, ಕಾರು ಸೇರಿದಂತೆ ೩೦ ವಾಹನಗಳಿವೆ. ಚುನಾವಣಾಧಿಕಾರಿಗೆ ಬುಧವಾರ ಸಲ್ಲಿಕೆ ಮಾಡಿರುವ ಆಸ್ತಿ ವಿವರದಲ್ಲಿ ಮುನಿರತ್ನ ಅವರು ಈ ಬಗ್ಗೆ ಉಲ್ಲೇಖ ಮಾಡಿದ್ದಾರೆ.
ಮುನಿರತ್ನ ಅವರ ಬಳಿ 10.66 ಲಕ್ಷ ರು.ನಗದು ಹೊಂದಿದ್ದಾರೆ.ಮುನಿರತ್ನ ಹೆಸರಲ್ಲಿ 26.11 ಕೋಟಿ ರು.ಮೌಲ್ಯದ ಚರಾಸ್ತಿ ಮತ್ತು 51.91 ಕೋಟಿ ರು. ಮೌಲ್ಯದ ಸ್ಥಿರಾಸ್ತಿ ಇದೆ. ಪತ್ನಿ ಬಳಿ 3. 98 ಲಕ್ಷ ರು.ನಗದು ಹೊಂದಿದ್ದು, ಅವರ ಹೆಸರಲ್ಲಿ 40.97 ಲಕ್ಷ ರು.ಮೌಲ್ಯದ ಚರಾಸ್ತಿ, 24.14 ಕೋಟಿ ರು. ಮೌಲ್ಯದ ಸ್ಥಿರಾಸ್ತಿ ಇದೆ.
ಮುನಿರತ್ನ ವಿರುದ್ಧ ಮೂರು ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಾಗಿರುವ ಬಗ್ಗೆಯೂ ಆಸ್ತಿ ವಿವರದಲ್ಲಿ ನಮೂದಿಸಲಾಗಿದೆ. ವಿವಿಧ ಬ್ಯಾಂಕ್, ಹಣಕಾಸು ಸಂಸ್ಥೆಯ ಖಾತೆಯಲ್ಲಿ 1. 08 ಕೋಟಿ ರು. ಇದ್ದು, 21. 37ಕೋಟಿ ರು. ಸಾಲ ನೀಡಿದ್ದಾರೆ. ದ್ವಿಚಕ್ರ ವಾಹನ, ಕಾರುಗಳು ಸೇರಿ 1.31 ಕೋಟಿ ರು. ಮೌಲ್ಯದ ವಾಹನಗಳು ಇವೆ.
ಮುನಿರತ್ನ ಹೆಸರಲ್ಲಿ 42.03 ಕೋಟಿ ರು. ಸಾಲ ಇದ್ದು, ಪತ್ನಿ ಹೆಸರಲ್ಲಿ 4.38 ಕೋಟಿ ರು. ಸಾಲ ಇದೆ. ಮುನಿರತ್ನ ಹೆಸರಲ್ಲಿ 3 ಕೆಜಿಗೂ ಅಧಿಕ ಚಿನ್ನ, 40.94 ಕೆಜಿ ಬೆಳ್ಳಿ ಇದ್ದು, 1.23 ಕೋಟಿ ರು. ಮೌಲ್ಯದಾಗಿದೆ. ಪತ್ನಿ ಬಳಿ 4.40 ಲಕ್ಷ ರು. ಮೌಲ್ಯದ 360 ಗ್ರಾಂ ಚಿನ್ನ ಇದೆ ಎಂದು ಆಸ್ತಿ ವಿವರದಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


