ಆರ್ ಆರ್ ನಗರದ 200ಕ್ಕೂ ಅಧಿಕ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
ದೇಶ ಹಾಗೂ ರಾಜ್ಯಗಳನ್ನು ಆಳಿದ ಬಹುತೇಕ ಮಹನೀಯರು ಕಾಂಗ್ರೆಸ್ ಪಕ್ಷದಿಂದಲೇ ತಮ್ಮ ನಾಯಕತ್ವ ಬೆಳೆಸಿಕೊಂಡಿದ್ದಾರೆ.

ಬೆಂಗಳೂರು: ದೇಶ ಹಾಗೂ ರಾಜ್ಯಗಳನ್ನು ಆಳಿದ ಬಹುತೇಕ ಮಹನೀಯರು ಕಾಂಗ್ರೆಸ್ ಪಕ್ಷದಿಂದಲೇ ತಮ್ಮ ನಾಯಕತ್ವ ಬೆಳೆಸಿಕೊಂಡಿದ್ದಾರೆ. ಈ ದೊಡ್ಡ ಇತಿಹಾಸ ಇರುವ ಪಕ್ಷದ ಧ್ವಜ ಧರಿಸುವುದೇ ಒಂದು ಮಹಾಭಾಗ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 200ಕ್ಕೂ ಹೆಚ್ಚು ಜನತಾದಳದ ಮುಖಂಡರನ್ನು ಕಾಂಗ್ರೆಸ್ ಗೆ ಬರಮಾಡಿಕೊಂಡ ಬಳಿಕ ಅವರು ಮಾತನಾಡಿದರು.
ಇವತ್ತು ರಾಜರಾಜೇಶ್ವರಿ ನಗರ ಕ್ಷೇತ್ರದ ಪಾಲಿಗೆ ಬಹಳ ಐತಿಹಾಸಿಕ ದಿನ. ಕಳೆದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ 60 ಸಾವಿರ ಮತಗಳನ್ನು ಪಡೆದಿದ್ದರು. ಈ ಕ್ಷೇತ್ರದ ರಾಜಕಾರಣ, ರಾಜ್ಯದ ರಾಜಕಾರಣ, ಪಕ್ಷದ ನಾಯಕತ್ವ, ಕಾಂಗ್ರೆಸ್ ಕಾರ್ಯಕ್ರಮಗಳನ್ನು ಗಮನದಲ್ಲಿಟ್ಟುಕೊಂಡು ಆ ಪಕ್ಷದ ಮುಖಂಡರು ಯಾವ ಷರತ್ತೂ ಇಲ್ಲದೆ, ದೊಡ್ಡ ಇತಿಹಾಸವಿರುವ ರಾಷ್ಟ್ರೀಯ ಪಕ್ಷದಲ್ಲಿ ಗುರುತಿಸಿಕೊಳ್ಳಲು ಇಚ್ಛೆಪಟ್ಟು ಆಗಮಿಸಿದ್ದಾರೆ ಎಂದರು.
ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಆರ್ಆರ್ ನಗರ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಬೆಟ್ಟಸ್ವಾಮಿ ಗೌಡ ಕೆಪಿಸಿಸಿ ಅಧ್ಯಕ್ಷರ ಸಮ್ಮುಖದಲ್ಲಿ ಇಂದು ಕಾಂಗ್ರೆಸ್ ಸೇರಿದ್ದಾರೆ. ಅವರ ಜೊತೆಗೆ 200ಕ್ಕೂ ಹೆಚ್ಚು ಕಾರ್ಯಕರ್ತರು ಹಾಗೂ ಮುಖಂಡರು ಕಾಂಗ್ರೆಸ್ ಸೇರ್ಪಡಗೊಂಡಿದ್ದಾರೆ. ಈ ವೇಳೆ ಸಂಸದ ಡಿಕೆ ಸುರೇಶ್ ಕೂಡ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


