ಏಳು ತಿಂಗಳ ನಂತರ ಶಿಕಾರಿಪುರಕ್ಕೆ ಸಿಎಂ ಯಡಿಯೂರಪ್ಪ ಭೇಟಿ
ಸತತ ಏಳು ತಿಂಗಳ ನಂತರ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತವರೂರು ಶಿಕಾರಿಪುರಕ್ಕೆ ಭಾನುವಾರ ಪ್ರಯಾಣ ಬೆಳೆಸಲಿದ್ದಾರೆ.

ಬೆಂಗಳೂರು: ಸತತ ಏಳು ತಿಂಗಳ ನಂತರ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತವರೂರು ಶಿಕಾರಿಪುರಕ್ಕೆ ಭಾನುವಾರ ಪ್ರಯಾಣ ಬೆಳೆಸಲಿದ್ದಾರೆ.
ಫೆಬ್ರವರಿಯಲ್ಲಿ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಶಿಕಾರಿಪುರಕ್ಕೆ ತೆರಳಿದ್ದರು, ಅದಾದ ನಂತರ ಲಾಕ್ ಕೊರೋನಾ ಕಾರಣದಿಂದಾಗಿ ತವರಿಗೆ ಹೋಗಿರಲಿಲ್ಲ.
ದಸರಾ ಆರಂಭವಾಗುತ್ತಿದ್ದಂತೆಯೇ ಸಿಎಂ ಅಲ್ಲಿಯೇ ಉಳಿದುಕೊಳ್ಳುವ ಸಾಧ್ಯತೆಯಿದೆ. ಮೂರು ದಿನಗಳ ಪ್ರವಾಸದಲ್ಲಿ ಸಿಎಂ ಆಪ್ತರು ಮತ್ತು ಕುಟುಂಬಸ್ಥರು ಭಾಗಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
18ರಂದು ಮಧ್ಯಾಹ್ನ ಬೆಂಗಳೂರಿನಿಂದ ಹೊರಡುವ ಮುಖ್ಯಮಂತ್ರಿ ಸಂಜೆ 4ಕ್ಕೆ ಶಿಕಾರಿಪುರ ಹೆಲಿಪ್ಯಾಡ್‌ಗೆ ತಲುಪುವರು. ನಂತರ ತಮ್ಮ ಮನೆಯಲ್ಲೇ ತಂಗುವರು. 19ರಂದು 11ಕ್ಕೆ ಕಲ್ಲುವಡ್ಡು ಏತನೀರಾವರಿ ಯೋಜನೆಗೆ ಶಂಕು ಸ್ಥಾಪನೆ ನೆರವೇರಿಸುವರು. ಉಡುತಡಿ ಅಕ್ಕಮಹಾದೇವಿ ಜನ್ಮಸ್ಥಳದ ಅಭಿವೃದ್ಧಿ ಕಾಮಗಾರಿ ವೀಕ್ಷಿಸುವರು.
20ರಂದು ಬೆಳಿಗ್ಗೆ 10ಕ್ಕೆ ಸಾಂಸ್ಕೃತಿಕ ಭವನದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಸವಲತ್ತು ವಿತರಿಸುವರು. ಅಂದು ಮಧ್ಯಾಹ್ನ 2.30ಕ್ಕೆ ಹೆಲಿಕಾಪ್ಟರ್ ಮೂಲಕ ಬೆಂಗಳೂರು ತಲುಪಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇನ್ನೂ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಅಕ್ಟೋಬರ್ 19 ಮತ್ತು 20 ರಂದು ಸ್ವಕ್ಷೇತ್ರ ಬಾದಾಮಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಹಲವು ಅಭಿವೃದ್ಧಿ ಕಾರ್ಯಕ್ರಮ ಮತ್ತು ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೋಳ್ಳಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


