ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅವರೇ ಮುಂದುವರೆಯಲಿದ್ದಾರೆ: ಸಿ.ಟಿ. ರವಿ
ರಾಜ್ಯ ಬಿಜೆಪಿ ಸರ್ಕಾರದ ಮುಖ್ಯಸ್ಥರಾಗಿ ಸರ್ವಾನುಮತದಿಂದ ಯಡಿಯೂರಪ್ಪ ಅವರನ್ನು ಆಯ್ಕೆ ಮಾಡಲಾಗಿದ್ದು, ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅವರೇ ಮುಂದುವರೆಯಲಿದ್ದಾರೆಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಯವರು ಹೇಳಿದ್ದಾರೆ.

ಮೈಸೂರು: ರಾಜ್ಯ ಬಿಜೆಪಿ ಸರ್ಕಾರದ ಮುಖ್ಯಸ್ಥರಾಗಿ ಸರ್ವಾನುಮತದಿಂದ ಯಡಿಯೂರಪ್ಪ ಅವರನ್ನು ಆಯ್ಕೆ ಮಾಡಲಾಗಿದ್ದು, ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅವರೇ ಮುಂದುವರೆಯಲಿದ್ದಾರೆಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಯವರು ಹೇಳಿದ್ದಾರೆ.
ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಆಧಾರವಿಲ್ಲದೆ ಮುಖ್ಯಮಂತ್ರಿಗಳ ಬದಲಾವಣೆ ಕುರಿತು ವದಂತಿಗಳನ್ನು ಹರಡಲಾಗುತ್ತಿದೆ. ಯಡಿಯೂರಪ್ಪ ಅವರೇ ರಾಜ್ಯ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆಂದು ಹೇಳಿದ್ದಾರೆ.
ಇದೇ ವೇಳೆ ಬೆಂಗಳೂರು ಗಲಭೆ ಪ್ರಕರಣ ಕುರಿತು ಮಾತನಾಡಿರುವ ಅವರು, ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕರನ್ನು ಸಿಲುಕಿಸುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.
ಪ್ರಕರಣ ಸಂಬಂಧ ಮಾಹಿತಿ ಕಲೆ ಹಾಕಲು ಹಾಗೂ ಎಸ್'ಡಿಪಿಐ ನಿಷೇಧಿಸಲು ಸರ್ಕಾರ ಹಾಗೂ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದೆ. ಕಾಂಗ್ರೆಸ್ ನಾಯಕರು ಸುಖಾಸುಮ್ಮನೆ ಡಿಜೆ ಹಳ್ಳಿ ಪ್ರಕರಣವನ್ನು ಉಪಚುನಾವಣೆಯ ವಿಚಾರವಾಗಿಸುತ್ತಿದೆ. ಇದಕ್ಕೆ ಪಕ್ಷ ದೊಡ್ಡ ಬೆಲೆಯನ್ನೇ ತೆರಬೇಕಾಗುತ್ತದೆ. ತಮ್ಮದೇ ದಲಿತ ಶಾಸಕರನ್ನು ರಕ್ಷಣೆ ಮಾಡುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ನಡುವೆ ಸಹಕಾರದ ಕೊರತೆಯಿದೆ ಎಂಬುದು ಇದರಿಂದ ಸ್ಪಷ್ಟವಾಗುತ್ತಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


