ಕನ್ನಡಿಗರು ಇಷ್ಟವಿಲ್ಲವಾ? ಅಥವಾ ಯಡಿಯೂರಪ್ಪನವರು ಇಷ್ಟವಿಲ್ಲವೇ?: ಪ್ರಧಾನಿ ಮೋದಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ
ತಮಗೆ ಕನ್ನಡಿಗರು ಅಂದ್ರೆ ಇಷ್ಟ ಇಲ್ಲವಾ? ಅಥವಾ ನಮ್ಮ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಇಷ್ಟವಿಲ್ಲವಾ? ಎಂದು ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.

ಕಲಬುರಗಿ: ತಮಗೆ ಕನ್ನಡಿಗರು ಅಂದ್ರೆ ಇಷ್ಟ ಇಲ್ಲವಾ? ಅಥವಾ ನಮ್ಮ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಇಷ್ಟವಿಲ್ಲವಾ? ಎಂದು ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.
ನೆರೆಪೀಡಿತ ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಪರಿಹಾರದ ಭರವಸೆ ನೀಡಿರುವುದಾಗಿ ಪ್ರಧಾನಿ ಮೋದಿ ಟ್ವಿಟ್ ಮಾಡಿದ್ದಾರೆ. ಆದರೆ ಕರ್ನಾಟಕದ ಪ್ರವಾಹದ ಬಗ್ಗೆ ಯಾವುದೇ ಪ್ರಸ್ತಾಪ ಮಾಡದ ಪ್ರಧಾನಿ ಮೋದಿಯ ನಡೆಯನ್ನು ಖರ್ಗೆ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ ಅವರು, ಭಾರೀ ಮಳೆ ಹಾಗೂ ಪ್ರವಾಹದಿಂದ ಕರ್ನಾಟಕ ರಾಜ್ಯ ಸಂಕಷ್ಟದಲ್ಲಿದೆ. ಆದರೂ, ನೀವು ಪ್ರತಿ ಬಾರಿ ತಾರತಮ್ಯ ನೀತಿ ಅನುಸರಿಸುತ್ತೀರಿ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.
ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಹಾಗೂ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರಿಗೆ ಸಹಾಯ ಮಾಡುವ ನಿಮಗೆ ಕನ್ನಡಿಗರು ಹಾಗೂ ಯಡಿಯೂರಪ್ಪನವರು ಕಾಣಿಸುವುದಿಲ್ಲವೇ? ಎಂದು ಕುಟುಕಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


