ನೇಷನ್ ಫಸ್ಟ್, ಪಾರ್ಟಿ ನೆಕ್ಸ್ಟ್, ಸೆಲ್ಫ್ ಲಾಸ್ಟ್: ತುಳಸಿ ಮುನಿರಾಜು ಗೌಡ!
ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಟಿಕೆಟ್ ಆಕಾಂಕ್ಷಿ ತುಳಸಿ ಮುನಿರಾಜುಗೌಡ ತೇಜಸ್ವಿನಿ ಅನಂತ್ ಕುಮಾರ್ ಅವರ ಹಾದಿ ಅನುಸರಿಸಿದ್ದಾರೆ.

ಬೆಂಗಳೂರು: ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಟಿಕೆಟ್ ಆಕಾಂಕ್ಷಿ ತುಳಸಿ ಮುನಿರಾಜುಗೌಡ ತೇಜಸ್ವಿನಿ ಅನಂತ್ ಕುಮಾರ್ ಅವರ ಹಾದಿ ಅನುಸರಿಸಿದ್ದಾರೆ.
ಕಳೆದ ಲೋಕಸಭೆ ಚುನಾವಣಾ ವೇಳೆ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿನಿ ಅವರಿಗೆ ಟಿಕೆಟ್ ನಿರಾಕರಿಸಿದಾಗ ಅವರು ನೀಡಿದ್ದ ಮೊದಲ ಪ್ರತಿಕ್ರಿಯೆ, ದೇಶ ಮೊದಲು ಎಂದು ಹೇಳಿದ್ದರು. ಸದ್ಯ ಅದೇ ಮಾರ್ಗ ಅನುಸರಿಸಿರುವ ತುಳಸಿ ಮುನಿರಾಜು ಗೌಡ
“ನೇಷನ್ ಫಸ್ಟ್, ಪಾರ್ಟಿ ನೆಕ್ಸ್ಟ್, ಸೆಲ್ಫ್ ಲಾಸ್ಟ್” ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ.
ಆರ್ ಆರ್ ನಗರ ಉಪ ಚುನಾವಣೆಯ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ತುಳಸಿ ಮುನಿರಾಜು ಟಿಕೆಟ್ ತಮಗೆ ದೊರೆಯುತ್ತದೆ ಎಂಬ ಆತ್ಮ ವಿಶ್ವಾಸದಿಂದ ತಮ್ಮ ಬೆಂಬಲಿಗರ ಜೊತೆ ಪ್ರಚಾರ ಮಾಡಿದ್ದರು. ಆದರೆ ಬಿಜೆಪಿ ನಾಯಕರು ನೀಡಿದ್ದ ಭರವಸೆಯಂತೆ ಮುನಿರತ್ನಗೆ ಟಿಕೆಟ್ ನೀಡಲಾಗಿದೆ. ಹೀಗಾಗಿ ಪಕ್ಷದ ನಿರ್ಧಾರವನ್ನು ಒಪ್ಪಿಕೊಳ್ಳುವುದಾಗಿ ತುಳಸಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


