ಕುಸುಮಾ ವಿರುದ್ಧ ಎಫ್ ಐ ಆರ್: ಸಬ್ ಇನ್ಸ್ ಪೆಕ್ಟರ್ ವರ್ಗಾವಣೆಗೆ ಆಯೋಗಕ್ಕೆ ಕಾಂಗ್ರೆಸ್ ಮನವಿ
ಆರ್.ಆರ್ .ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ದ ಎಫ್ ಐಆರ್ ದಾಖಲಿಸಿರುವ ಆರ್. ಆರ್. ನಗರ ಠಾಣೆಯ ಇನ್ಸ್ ಪೆಕ್ಟರ್ ನವೀನ್ ಅವರನ್ನು ವರ್ಗಾವಣೆ ಮಾಡುವಂತೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

ಬೆಂಗಳೂರು: ಆರ್.ಆರ್ .ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ದ ಎಫ್ ಐಆರ್ ದಾಖಲಿಸಿರುವ ಆರ್. ಆರ್. ನಗರ ಠಾಣೆಯ ಇನ್ಸ್ ಪೆಕ್ಟರ್ ನವೀನ್ ಅವರನ್ನು ವರ್ಗಾವಣೆ ಮಾಡುವಂತೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.
ಈ ಸಂಬಂಧ ಮುಖ್ಯ ಚುನಾವಣಾಧಿಕಾರಿಗೆ ಮನವಿ ಮಾಡಿರುವ ಕಾಂಗ್ರೆಸ್ ಸದಸ್ಯರು, ಎಸ್ ಐ ನವೀನ್ ಅವರು ಪೂರ್ವಾಗ್ರಹ ಪೀಡಿತರಾಗಿ ಕುಸುಮಾ ವಿರುದ್ದ ಎಫ್ ಐ ಆರ್ ದಾಖಲಿಸಿದ್ದಾರೆ ಎಂದು ಮನವಿಯಲ್ಲಿ ಆರೋಪಿಸಿದ್ದಾರೆ.
ಈ ಎಫ್ ಐ ಆರ್ ರಾಜಕೀಯ ದುರುದ್ದೇಶದಿಂದ ಕೂಡಿದೆ, ಎಸ್ ಐ ನವೀನ್ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ಆಪ್ತ ಸ್ನೇಹಿತರಾಗಿದ್ದಾರೆ. ಮುನಿರತ್ನ ಸೂಚನೆಯಂತೆ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮುಖಂಡರಾದ ವಿ.ಎಸ್ ಉಗ್ರಪ್ರ ನೇತೃತ್ವದ ನಿಯೋಗ ಆಯೋಗ ದೂರು ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


