ನಾನು ಈ ಕ್ಷೇತ್ರದ ಮಗ, ಆರ್‌ಆರ್ ನಗರದಲ್ಲಿ ಗೆಲುವು ನನ್ನದೇ: ಜೆಡಿಎಸ್ ಅಭ್ಯರ್ಥಿ ವಿ.ಕೃಷ್ಣಮೂರ್ತಿ ವಿಶ್ವಾಸ
ನಾನು ಈ ಕ್ಷೇತ್ರದ ಮಗ ನಿಮ್ಮೆಲ್ಲರ ಕಷ್ಟ ಸುಖಗಳನ್ನು ನೋಡಿಕೊಂಡೇ ಬೆಳೆ ದವನು. ಜೆಡಿಎಸ್ ಕಾರ್ಯಕರ್ತರು ಯಾವುದಕ್ಕೂ ಹೆದರಬೇಕಿಲ್ಲ. ಈ ಚುನಾವಣೆಯಲ್ಲಿ ನಾವೇ ಗೆಲ್ಲುವುದು ಎಂದು ರಾಜರಾಜೇಶ್ವರಿ ನಗರ ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ವಿ. ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರು: ನಾನು ಈ ಕ್ಷೇತ್ರದ ಮಗ ನಿಮ್ಮೆಲ್ಲರ ಕಷ್ಟ ಸುಖಗಳನ್ನು ನೋಡಿಕೊಂಡೇ ಬೆಳೆ ದವನು. ಜೆಡಿಎಸ್ ಕಾರ್ಯಕರ್ತರು ಯಾವುದಕ್ಕೂ ಹೆದರಬೇಕಿಲ್ಲ. ಈ ಚುನಾವಣೆಯಲ್ಲಿ ನಾವೇ ಗೆಲ್ಲುವುದು ಎಂದು ರಾಜರಾಜೇಶ್ವರಿ ನಗರ ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ವಿ. ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.
ಆರ್‌ಆರ್ ನಗರ ವ್ಯಾಪ್ತಿಯ ಸಜ್ಜೆಪಾಳ್ಯ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕರ್ತರು ಯಾವುದಕ್ಕೂ ಹೆದರಬೇಕಿಲ್ಲ. ನಾನು ಎಂದೆಂದಿಗೂ ನಿಮ್ಮ ಜೊತೆ ಇರುತ್ತೇನೆ. ಬಿಜೆಪಿ-ಕಾಂಗ್ರೆಸ್‌ನವರು ಎಷ್ಟೇ ಜನರನ್ನು ಜೆಡಿಎಸ್‌ನಿಂದ ಸೇರಿಸಿಕೊಂಡರು ನಮ್ಮ ಮೇಲೆ ಯಾವ ಪರಿಣಾಮ ಬೀರಲ್ಲ. ರಾಷ್ಟ್ರೀಯ ಪಕ್ಷಗಳ ವಿರುದ್ಧ ಹೋರಾಟ ಮುಂದುವರಿಸೋಣ ಎಂದು ಕಾರ್ಯಕರ್ತರಲ್ಲಿ ಆತ್ಮಸ್ಥೈರ್ಯ ಹೆಚ್ಚಿಸಿದರು.
ಬೆಳಗಿನಿಂದಲೇ ಬಿರುಸಿನ ಪ್ರಚಾರ ನಡೆಸಿದ ಕೃಷ್ಣಮೂರ್ತಿ, ಬಿಇಎಂಎಲ್ ಲೇಔಟ್‌ನ ಮಾರುತಿ ದೇವಸ್ಥಾನದ ಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ದಿನವಿಡೀ ಪ್ರೆಸ್ ಲೇಔಟ್ ಪಾರ್ಕ್, ಬಿಇಎಂಎಲ್ ಲೇಔಟ್, ಲಗ್ಗೆರೆ, ಕೊಟ್ಟಿಗೆಪಾಳ್ಯ ಹಾಗೂ ಜ್ಞಾನಭಾರತಿ ವಾರ್ಡ್‌ಗಳಲ್ಲಿ ಮನೆ-ಮನೆಗೆ ಭೇಟಿ ನೀಡಿ ಮತಯಾಚಿಸಿದರು. ಅಭ್ಯರ್ಥಿಗೆ ಜೆಡಿಎಸ್ ಬೆಂಗಳೂರು ನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ್ ಸೇರಿ ಅನೇಕ ಮುಖಂಡರು ಸಾಥ್ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


