ಆರ್.ಆರ್. ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನರನ್ನು ಅನರ್ಹಗೊಳಿಸಿ: ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕು ಎಂದು ಅಡ್ಡ ದಾರಿ ಹಿಡಿದಿರುವ ಬಿಜೆಪಿ ಅಭ್ಯರ್ಥಿ ಮುನಿರತ್ನ ಮತದಾರರಿಗೆ ಹಣ ನೀಡಿ ಗುರುತಿನ ಚೀಟಿಯನ್ನು ಪಡೆಯುತ್ತಿದ್ದಾರೆ. ಮತದಾರರಿಗೆ ಆಮೀಷ ನೀಡುವ ಮೂಲಕ ಅಕ್ರಮ ಎಸಗುತ್ತಿದ್ದಾರೆ ಎಂದು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಬೆಂಗಳೂರು: ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕು ಎಂದು ಅಡ್ಡ ದಾರಿ ಹಿಡಿದಿರುವ ಬಿಜೆಪಿ ಅಭ್ಯರ್ಥಿ ಮುನಿರತ್ನ ಮತದಾರರಿಗೆ ಹಣ ನೀಡಿ ಗುರುತಿನ ಚೀಟಿಯನ್ನು ಪಡೆಯುತ್ತಿದ್ದಾರೆ. ಮತದಾರರಿಗೆ ಆಮೀಷ ನೀಡುವ ಮೂಲಕ ಅಕ್ರಮ ಎಸಗುತ್ತಿದ್ದಾರೆ ಎಂದು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ನೇತೃತ್ವದ ನಿಯೋಗ ಮಂಗಳವಾರ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಚುನಾವಣೆಗೆ ಮುನಿರತ್ನ ಸ್ಪರ್ಧಿಸದಂತೆ ಅನರ್ಹಗೊಳಿಸಬೇಕು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ. ಉಪ ಚುನಾವಣೆ ವೇಳೆ ಮತದಾರರಿಗೆ ಆಮಿಷವನ್ನು ಬಿಜೆಪಿ ಅಭ್ಯರ್ಥಿ ವೊಡ್ಡುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಬಿಜೆಪಿ ಅಭ್ಯರ್ಥಿ ಮುನಿರತ್ನ ಅಕ್ರಮವಾಗಿ ಮತದಾರರ ಗುರುತಿನ ಚೀಟಿಯನ್ನು ಸಂಗ್ರಹ ಮಾಡಿದ್ದಾರೆ. ತಲಾ 5 ಸಾವಿರ ರೂ. ನೀಡಿ ಗುರುತಿನ ಚೀಟಿಯನ್ನು ಸಂಗ್ರಹ ಮಾಡಿದ್ದಾರೆ ಎಂದು ಕಾಂಗ್ರೆಸ್ ಆಯೋಗಕ್ಕೆ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮುನಿರತ್ನ ಅವರು ಹಣ ಮತ್ತು ಉಡುಗೊರೆಗಳ ಮೂಲಕ ಮತದಾರರನ್ನು ಸೆಳೆಯಲು ಪ್ರಯತ್ನ ನಡೆಸಿದ್ದಾರೆ. ಆದ್ದರಿಂದ, ಅವರು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಅನರ್ಹಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


