ರಾಜಕೀಯ

ಯಡಿಯೂರಪ್ಪರನ್ನು ಸಿಎಂ ಹುದ್ದೆಯಿಂದ ತೆಗೆದುಹಾಕಲು ಕರ್ನಾಟಕದಲ್ಲಿ ಯುದ್ಧವೇ ನಡೆಯುತ್ತಿದೆ: ಸುರ್ಜೆವಾಲ

ದೆಹಲಿಯ ನೆರವಿನೊಂದಿಗೆ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಲು ಕರ್ನಾಟಕದಲ್ಲಿ ಯುದ್ಧವೇ ನಡೆಯುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ ಅವರು ಹೇಳಿದ್ದಾರೆ.

ಯಡಿಯೂರಪ್ಪರನ್ನು ಸಿಎಂ ಹುದ್ದೆಯಿಂದ ತೆಗೆದುಹಾಕಲು ಕರ್ನಾಟಕದಲ್ಲಿ ಯುದ್ಧವೇ ನಡೆಯುತ್ತಿದೆ: ಸುರ್ಜೆವಾಲ
ರಣದೀಪ್ ಸುರ್ಜೇವಾಲ
Published On :

ಬೆಂಗಳೂರು: ದೆಹಲಿಯ ನೆರವಿನೊಂದಿಗೆ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಲು ಕರ್ನಾಟಕದಲ್ಲಿ ಯುದ್ಧವೇ ನಡೆಯುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ ಅವರು ಹೇಳಿದ್ದಾರೆ.

ಅಧಿಕಾರ ಲಾಲಸೆಯ ದೊಂಬರಾಟದಲ್ಲಿ ಯಾವುದೇ ಬೆಲೆ ತೆತ್ತಾದರೂ ಮಂತ್ರಿಗಿರಿ ಪಡೆಯುವ ಚಟ ಬಿಜೆಪಿ ಮೈಮೇಲೆರಿದೆ. ಆದರೆ ಪ್ರವಾಹ, ಅತಿವೃಷ್ಠಿ, ಕೊರೋನಾ ಸಂತ್ರಸ್ತ ಕನ್ನಡಿಗರ ಕಷ್ಟ ಇವರಿಗೆ ಕೇಳದಾಗಿದೆ! ಎಂದು ರಂದೀಪ್ ಸಿಂಗ್ ಸುರ್ಜೇವಾಲ ಟೀಕಿಸಿದ್ದಾರೆ.

ಈ ಬಗ್ಗೆ ಕನ್ನಡದಲ್ಲೇ ಟ್ವಿಟ್ ಮಾಡಿರುವ ಅವರು, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಯಡಿಯೂರಪ್ಪ ಅವರ ಬಗ್ಗೆ ನೀಡಿರುವ ಹೇಳಿಕೆಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಯಡಿಯೂರಪ್ಪ ಹೆಚ್ಚು ದಿನ ಮುಖ್ಯಮಂತ್ರಿಯಾಗಿ ಉಳಿಯುವುದಿಲ್ಲ, ಮೇಲಿನವರಿಗೂ ಇದು ಇಷ್ಟವಿಲ್ಲ ಎಂದು ಯತ್ನಾಳ್ ಅವರು ನಿನ್ನೆ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.