ನಳಿನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ; ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬು ಇಲ್ಲ: ಸಿದ್ದರಾಮಯ್ಯ
ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಅವರನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿ ತಕ್ಷಣ ಕಾಡಿಗೆ ಕೊಂಡು ಹೋಗಿ ಬಿಡಬೇಕು ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು: ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಒಬ್ಬ ಕಾಡು ಮನುಷ್ಯ, ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿ ತಕ್ಷಣ ಕಾಡಿಗೆ ಕೊಂಡು ಹೋಗಿ ಬಿಡಬೇಕು ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ತಮ್ಮ ಪಕ್ಷ ಸೇರಬೇಕಾದರೆ ಹತ್ತು ವರ್ಷ ಪಕ್ಷದ ಕಚೇರಿಯ ಕಸಗುಡಿಸಬೇಕು ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದರು. ಈ ನಳಿನ್ ಕುಮಾರ್ ಕಟೀಲನ್ನು ಇನ್ನು ಒಂದು ಹತ್ತು ವರ್ಷ ಕಚೇರಿಯ ಕಸಗುಡಿಸಲು ಹಚ್ಚಿದರೆ ಏನಾದರೂ ಸ್ವಲ್ಪ ಬುದ್ದಿ ಬರಬಹುದೇನೋ” Immature fellow ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ನಳಿನ್ ಕುಮಾರ್ ಕಟೀಲು ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬು ಇಲ್ಲ. ಈ ಬೆನ್ನೆಲುಬಿಲ್ಲದ ಅಧ್ಯಕ್ಷನಿಗೆ ತಮ್ಮದೇ ಪಕ್ಷದ ಶಾಸಕರು ಪ್ರತಿದಿನ ತಮ್ಮದೇ ಮುಖ್ಯಮಂತ್ರಿ ವಿರುದ್ಧ ಟೀಕಾಪ್ರಹಾರ ಮಾಡುತ್ತಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ ಇಲ್ಲ. ನಮ್ಮ ಪಕ್ಷದ ಬಗ್ಗೆ ಕೂಗಾಡ್ತಾರೆ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಅಲೆಯುತ್ತಿದ್ದ ಈ ನಳಿನ್ ಕುಮಾರ್ ಕಟೀಲ್ ಎಂಬ ಪೋಕರಿಯನ್ನು ಯಾರೋ ತಮ್ಮ ‘ಸಂತೋಷ’ಕ್ಕಾಗಿ ತಂದು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದರು. ಇವರಿಗೆ ಕೊಟ್ಟಿರುವ ಕೆಲಸ ಪಕ್ಷ ಕಟ್ಟುವುದಲ್ಲ, ಬಿ.ಎಸ್.ಯಡಿಯೂರಪ್ಪನವರನ್ನು ಕೆಡವುದು, ಅದನ್ನೇ ಮಾಡುತ್ತಾ ಇದ್ದಾರೆ. ಈಗ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಹೇಗಾದರೂ ಮಾಡಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ಅದರ ಹೊಣೆಯನ್ನು ಯಡಿಯೂರಪ್ಪನವರ ತಲೆ ಮೇಲೆ ಕಟ್ಟಿ ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಬೇಕು. ಇದು ನಳಿನ್ ಕುಮಾರ್ ಕಟೀಲು ಅವರಿಗೆ ಪಕ್ಷದೊಳಗಿನ ಕೆಲವು ನಾಯಕರೇ ಕೊಟ್ಟಿರುವ ಟಾಸ್ಕ್ ಎನ್ನುವುದು ಈಗ ಗುಟ್ಟಾಗಿ ಉಳಿದಿಲ್ಲ.
ಮಾತೆತ್ತಿದರೆ ಸಂಸ್ಕಾರ,ಸಂಸ್ಕೃತಿ ಎಂದು ಬೋಧನೆ ಮಾಡುವ ಸಂಘ ಪರಿವಾರದಲ್ಲಿ ಯಾರಾದರೂ ಹಿರಿಯರು, ಮಾನವಂತರು ಉಳಿದಿದ್ದರೆ ಮೊದಲು ಈ ನಳಿನ್ ಕುಮಾರ್ ಕಟೀಲ್ ಅವರಿಗೆ ಸ್ವಲ್ಪ ಬುದ್ದಿ ಹೇಳಿ ನಾಲಿಗೆ ಬಿಗಿಹಿಡಿದು ಮಾತನಾಡಲು ಕಲಿಸಿ. ಇಲ್ಲದೆ ಇದ್ದರೆ ಇವರೊಬ್ಬರೇ ಸಾಕು ಎಲ್ಲರ ಮಾನ ಕಳೆಯಲು ಎಂದು ಸಿದ್ದರಾಮಯ್ಯ ಪ್ರಕಟಣೆಯಲ್ಲಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


