ರಾಜ್ಯದ ಜನತೆಗೆ ಉಚಿತವಾಗಿ ಕೊರೋನಾ ಲಸಿಕೆ ಕೊಡುವ ಧಮ್ ಇದೆಯೇ: ಸಿದ್ದರಾಮಯ್ಯ ಪ್ರಶ್ನೆ
ಪ್ರಾಣ ರಕ್ಷಕ ಕೊರೊನಾ ಲಸಿಕೆಯನ್ನು ಬಿಹಾರ ರಾಜ್ಯಕ್ಕೆ ಉಚಿತವಾಗಿ ನೀಡುವ ಭರವಸೆ ನೀಡಿರುವ ನಮ್ಮ ರಾಜ್ಯದ ರಾಜ್ಯಸಭಾ ಸದಸ್ಯೆ ಮತ್ತು ಕೇಂದ್ರ ಹಣಕಾಸು ಸಚಿವೆ ಅವರ ಔದಾರ್ಯದ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸುವುರಾ ಅವರೇ? ಎಂದು ಸಿದ್ದರಾಮ್ಯ ಟ್ವೀಟ್ ಮಾಡಿದ್ದಾರೆ.

ಬೆಂಗಳೂರು: ಪ್ರಾಣ ರಕ್ಷಕ ಕೊರೊನಾ ಲಸಿಕೆಯನ್ನು ಬಿಹಾರ ರಾಜ್ಯಕ್ಕೆ ಉಚಿತವಾಗಿ ನೀಡುವ ಭರವಸೆ ನೀಡಿರುವ ನಮ್ಮ ರಾಜ್ಯದ ರಾಜ್ಯಸಭಾ ಸದಸ್ಯೆ ಮತ್ತು ಕೇಂದ್ರ ಹಣಕಾಸು ಸಚಿವೆ ಅವರ ಔದಾರ್ಯದ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸುವುರಾ ಅವರೇ? ಎಂದು ಸಿದ್ದರಾಮ್ಯ ಟ್ವೀಟ್ ಮಾಡಿದ್ದಾರೆ.
ಕರ್ನಾಟಕದಲ್ಲಿ ಕೊರೊನಾ ವೈರಸ್ ಭೀತಿಗೊಳಗಾಗಿರುವ ಜನರಿಗೆ ಲಸಿಕೆಯನ್ನು ಉಚಿತವಾಗಿ ಕೊಡಿಸುವ 'ಧಮ್' ಇದೆಯೇ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಪ್ರಶ್ನೆ ಮಾಡಿದ್ದಾರೆ.
ನಿರ್ಮಲಾ ಸೀತಾರಾಮನ್ ಅವರ ಮನವೊಲಿಸಿ, ನಿಮ್ಮದೇ ಪಕ್ಷ ಅಧಿಕಾರದಲ್ಲಿರುವ ಕರ್ನಾಟಕದದಲ್ಲಿ ಕೊರೊನಾದಿಂದ ಭೀತಿಗೊಳಗಾಗಿರುವ ಜನರಿಗೆ ಕೊರೊನಾ ಲಸಿಕೆಯನ್ನು ಉಚಿತವಾಗಿ ಕೊಡಿಸುವ 'ಧಮ್' (ಇದು ನಿಮ್ಮದೇ ಭಾಷೆ) ನಿಮಗಿದೆಯೇ ಕಟೀಲ್ ಅವರೇ? ಎಂದು ಅವರು ಸವಾಲು ಹಾಕಿದ್ದಾರೆ.
ಬಿಹಾರ ವಿಧಾನಸಭೆ ಚುನಾವಣೆಗೆ ಗುರುವಾರ ಪ್ರಣಾಳಿಕೆ ಘೋಷಣೆ ಮಾಡಿರುವ ಬಿಜೆಪಿಯು, ಬಿಹಾರದ ಜನರಿಗೆ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡುವ ಭರವಸೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


