ಕಾಂಗ್ರೆಸ್'ನ 5 ಶಾಸಕರು ಶೀಘ್ರದಲ್ಲೇ ಬಿಜೆಪಿಗೆ ಸೇರ್ಪಡೆ: ಸವದಿ ಹೇಳಿಕೆಯಿಂದ 'ಕೈ' ಪಡೆಗೆ ಮತ್ತೆ ಟೆನ್ಷನ್ ಶುರು!
ಕಾಂಗ್ರೆಸ್ ಪಕ್ಷದ ಐವರು ಶಾಸಕರು ಬಿಜೆಪಿಗೆ ಸೇರ್ಪಡೆಗೊಳ್ಳಲು ಸಿದ್ಧವಾಗಿದ್ದಾರೆಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿಕೆ ನೀಡಿದ್ದು, ಸವದಿಯವರ ಹೇಳಿಕೆಯು ಇದೀಗ ಕಾಂಗ್ರೆಸ್ ನಾಯಕರ ನಿದ್ದೆ ಕೆಡುವಂತೆ ಮಾಡಿದೆ.

ಶಿರಾ: ಕಾಂಗ್ರೆಸ್ ಪಕ್ಷದ ಐವರು ಶಾಸಕರು ಬಿಜೆಪಿಗೆ ಸೇರ್ಪಡೆಗೊಳ್ಳಲು ಸಿದ್ಧವಾಗಿದ್ದಾರೆಂದು ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿಕೆ ನೀಡಿದ್ದು, ಸವದಿಯವರ ಹೇಳಿಕೆಯು ಇದೀಗ ಕಾಂಗ್ರೆಸ್ ನಾಯಕರ ನಿದ್ದೆ ಕೆಡುವಂತೆ ಮಾಡಿದೆ.
ತಾವರೆಕೆರೆ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿಎಂ.ರಾಜೇಶ್ ಗೌಡ ಪರ ಪ್ರಚಾರದಲ್ಲಿ ತೊಡಗಿದ್ದ ಸವದಿಯವರು, ಕಾಂಗ್ರೆಸ್ ಪಕ್ಷದ ಐವರು ನಾಯಕರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಸಿದ್ಧರಾಗಿದ್ದಾರೆ. ಆ ನಾಯಕರಿಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಭವಿಷ್ಯವಿಲ್ಲ ಎಂಬ ಸತ್ಯ ತಿಳಿದಿದ್ದು. ಹೀಗಾಗಿಯೇ ಪಕ್ಷ ಬದಲಿಸುವ ಮನಸ್ಸು ಮಾಡಿದ್ದಾರೆಂದು ಹೇಳಿದ್ದಾರೆ.
ಶಿರಾ ಹಾಗೂ ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತವಾಗಿದೆ. ಚುನಾವಣೆಯೊಂದಿಗೆಯೇ ಕಾಂಗ್ರೆಸ್ ಪಕ್ಷದ ಐವರು ಶಾಸಕರು ಬಿಜೆಪಿಗೆ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


